LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಕಸರತ್ತು : ಸಿದ್ದರಾಮಯ್ಯ ಜೊತೆ ಡಿ.ಕೆ.ಶಿ ಮಿಟಿಂಗ್ 

Advertisement

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಇದೀಗ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ. ನೂತನ ಸಚಿವರು ಪ್ರಭಾವಿ ಖಾತೆಗಾಗಿ ಲಾಭಿ ಆರಂಭಿಸಿದ್ದಾರೆ. ಯಾರಿಗೆ ಯಾವ ಖಾತೆ ನೀಡಬೇಕೆಂಬುದೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿದ ಶಾಸಕರ ಅಸಮಾಧಾನ ತೀವ್ರಗೊಂಡಿದ್ದು, ಜಿಲ್ಲೆ ಜಿಲ್ಲೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ಒಂದೆಡೆ ಅಸಮಾಧಾನಗೊಂಡಿರುವ ಶಾಸಕರ ಮನವೊಲಿಸುವ ಯತ್ನ ನಡೆಯುತ್ತಿದ್ದರೆ ಮತ್ತೊಂದೆಡೆ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ.

ಪ್ರಬಲ ಖಾತೆಗಳಿಗಾಗಿ ಸಚಿವರ ಮಧ್ಯೆ ಜಿದ್ದಾಜಿದ್ದಿ ಶುರುವಾಗಿದ್ದು, ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್‌, ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ನಂತರ, ಡಿ.ಕೆ ಶಿವಕುಮಾರ್ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ.

ಒಂದೆಡೆ ಅಸಮಾಧಾನಗೊಂಡಿರುವ ಶಾಸಕರ ಮನವೊಲಿಸುವ ಯತ್ನ ನಡೆಯುತ್ತಿದ್ದರೆ ಮತ್ತೊಂದೆಡೆ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ.

ಪ್ರಬಲ ಖಾತೆಗಳಿಗಾಗಿ ಸಚಿವರ ಮಧ್ಯೆ ಜಿದ್ದಾಜಿದ್ದಿ ಶುರುವಾಗಿದ್ದು, ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್‌, ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ನಂತರ, ಡಿ.ಕೆ ಶಿವಕುಮಾರ್ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ.

ಹೊಸದಾಗಿ ಸಚಿವರಾದವರು ಇಂಥದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದರೆ, ಮೊದಲ ಸುತ್ತಿನಲ್ಲಿ ಸಚಿವರಾದವರು ತಮ್ಮ ಖಾತೆ ಬದಲಾವಣೆಗೆ ಬೇಡಿಕೆ ಇಡುತ್ತಿದ್ದಾರೆ.

ಬಸವರಾಜ್ ರಾಯರೆಡ್ಡಿ ಹಣಕಾಸು ಖಾತೆ ಕೇಳಿದ್ದರೆ, ಸಮಾಜ ಕಲ್ಯಾಣ ಇಲಾಖೆಗಾಗಿ ಕೆ.ಹೆಚ್. ಮುನಿಯಪ್ಪ, ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಸಚಿವ ಮುನಿಯಪ್ಪ ರಾಹುಲ್ ಗಾಂಧಿ ಎದುರು ಆಹಾರ ಖಾತೆ ಬದಲಾಗಿ ತಮಗೆ ಸಮಾಜಕಲ್ಯಾಣ ಖಾತೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ನಡುವೆ ಯಾವ ಖಾತೆ ಕೊಟ್ಟರೂ ನಿಭಾಯಿಸುವುದಾಗಿ ಸಚಿವ ಜಮೀರ್ ಅಹ್ಮದ್ ಹಾಗೂ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಒಟ್ಟಾರೆ ಸಿಎಂ, ಹೈಕಾಂಡ್ ಭೇಟಿ ಬಳಿಕ ಯಾವ ಸಚಿವರಿಗೆ ಯಾವ ಖಾತೆ ಎಂಬುದು ಸ್ಪಷ್ಟವಾಗಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಖಂಡ ಕರ್ನಾಟಕ ಹೂಗಾರ ಮಹಾ ಸಭಾದ ಸಾಮಾನ್ಯ ಸಭೆ: ರಾಜ್ಯಾಧ್ಯಕ್ಷ ಬಸವರಾಜ್ ಹೂಗಾರ್ಆಗಸ್ಟ್ 15, 16 ರಂದು ಶ್ರೀ ಉಡುಸಲಮ್ಮ ದೇವಿಯವರ ನೇತ್ರೋನ್ಮಿಲನ‌ ಕಾರ್ಯಕ್ರಮಆಸ್ತಿಗಾಗಿ ಕಲ್ಲಿನಿಂದ ಜಜ್ಜಿ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಯುವಕರ ಮೌನ ಪ್ರತಿಭಟನೆ; ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದ ಇಒ ವೀರಣ್ಣ ವಾಲಿಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಕಸರತ್ತು : ಸಿದ್ದರಾಮಯ್ಯ ಜೊತೆ ಡಿ.ಕೆ.ಶಿ ಮಿಟಿಂಗ್ ​ಕಾಯಕವೇ ಕೈಲಾಸವೆಂದ ನಿಸ್ಸ್ವಾರ್ಥ ಸೇವಕ: ಶ್ರೀ ಶಿವಪ್ಪ ತಳವಾರ ಅವರಿಗೆ ಭಾವಪೂರ್ಣ ಶುಭಕೋರಿಕೆಪಕ್ಷ ಶಿಸ್ತಿಗೆ ಸವಾಲು: ಶಿವಾಜಿ ಮೇತ್ರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ ಸ್ಥಿತಿ : ಅವರ ಹುತಾತ್ಮತೆಯ ಸುದ್ದಿ ಶೀಘ್ರಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ