Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ : ಪೊಲೀಸ್ ಆಯುಕ್ತರಿಗೆ ನಟಿ ರಮ್ಯಾ ದೂರು

Advertisement
ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ವಿಚಾರವಾಗಿ ಈಗಾಗಲೇ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಈ ಬೆನ್ನಲ್ಲೇ ಇಂದು ನಟಿ ರಮ್ಯಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಖುದ್ದು ದೂರು ಸಲ್ಲಿಸಿದ್ದಾರೆ.ಈ ಮೂಲಕ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಸಮರ ಸಾರಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ.

ಅದಕ್ಕೆ ಕಾರಣ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಕೇಸ್‌ನ ವಿಚಾರಣೆ. ಹೈಕೋರ್ಟ್‌ ನೀಡಿದ್ದ ಜಾಮೀನಿನ ಬಗ್ಗೆ ಸುಪ್ರೀಂ ಕೋರ್ಟ್ ಅಸಮಧಾನವನ್ನು ಹೊರ ಹಾಕಿತ್ತು.

ಈ ಬೆನ್ನಲ್ಲೇ ರಮ್ಯಾ ಅದನ್ನು ಬೆಂಬಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲಿಂದ ದರ್ಶನ್ ಫ್ಯಾನ್ಸ್ ರಮ್ಯಾರನ್ನು ಅಶ್ಲೀಲ ಪದಗಳಿಂದ ಟೀಕಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜುಗಳು ಬರುತ್ತವೆ ಎಂದು ನಟಿ ರಮ್ಯಾ ಆರೋಪಿಸಿದ್ದರು.

ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ತೀವ್ರವಾಗಿ ಕಿಡಿ ಕಾರಿದ್ದಾರೆ. ಇದೀಗ ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ವಿಚಾರವಾಗಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾದಂತ ನಟಿ ರಮ್ಯಾ ದೂರು ನೀಡಿದ್ದಾರೆ.

ಇನ್ನು ಇದೆ ಈ ವಿಚಾರವಾಗಿ ಇದೀಗ ರಕ್ಷಿತಾ ಪ್ರೇಮ್ ಎಂಟ್ರಿ ಕೊಟ್ಟಿದ್ದು ನಟಿ ರಮ್ಯಾಗೆ ಟಾಂಗ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೌದು ನಟಿ ರಮ್ಯಾ ಗೆ ರಕ್ಷಿತಾ ಪ್ರೇಮ್ ಟಾಂಗ್ ಕೊಟ್ರ ಎನ್ನುವ ಸುದ್ದಿ ಹರಿದಾಡುತ್ತಿದೆ.

ದರ್ಶನ್ ಪರ ನಟಿ ರಕ್ಷಿತಾ ಇದೀಗ ಬ್ಯಾಟ್ ಬೀಸಿದ್ದಾರೆ ಎನ್ನಲಾಗುತ್ತಿದೆ ಜನರ ಮಾನಸಿಕ ಆರೋಗ್ಯ ನೋಡೋಕೆ ಸಾಧ್ಯವಿಲ್ಲ. ದಯವಿಟ್ಟು ಯಾವಾಗಲೂ ದಯೆಯಿಂದ ಇರಿ ಎಂದು ರಕ್ಷಿತಾ ಪ್ರೇಮಾ ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಖಾತೆಯಲ್ಲಿ ಸ್ಟೋರಿ ಹಾಕಿದ್ದಾರೆ. ಇದೀಗ ಈ ಒಂದು ವಿವಾದ ಎಲ್ಲಿಗೆ ಹೋಗಿ ನಿಲ್ಲುತ್ತೆ ಎನ್ನುವುದು ಕಾದು ನೋಡಬೇಕು.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ