Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಕಿಚ್ಚ ಸುದೀಪ್ ದೇವಸ್ಥಾನ ನಿರ್ಮಿಸಿ ನಿತ್ಯ ಪೂಜಿಸುವ ತಮಿಳುನಾಡಿನ ಅಭಿಮಾನಿ

Advertisement
ಚಾಮರಾಜನಗರ: ನಟರ ಮೇಲಿನ ಅಭಿಮಾನ ಯಾವ ಮಟ್ಟಕ್ಕೆ ಇರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಅವರ ಮೇಲಿನ ಅತೀವ ಪ್ರೀತಿಯಿಂದ ಅಭಿಮಾನಿಯೊಬ್ಬರು ತಮಿಳುನಾಡಿನಲ್ಲಿ ಅವರಿಗಾಗಿ ಪುಟ್ಟ ಗುಡಿಯೊಂದನ್ನು ನಿರ್ಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.

ಚಾಮರಾಜನಗರದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ತಾಲೂಕಿನ ದೊಡ್ಡಗಾಜನೂರಿನಲ್ಲಿ ಈ ಅಪರೂಪದ ಅಭಿಮಾನ ಕಂಡುಬಂದಿದೆ.

ಇಲ್ಲಿನ ನಿವಾಸಿ ಸಿದ್ದರಾಜು ಎಂಬುವವರು ಕಿಚ್ಚ ಸುದೀಪ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ತಮ್ಮ ಮನೆಯ ಆವರಣದಲ್ಲಿಯೇ ಸುದೀಪ್ ಅವರಿಗಾಗಿ ಒಂದು ಸಣ್ಣ ಗುಡಿಯನ್ನು ನಿರ್ಮಿಸಿದ್ದಾರೆ.

ಈ ಗುಡಿಯಲ್ಲಿ ಮಹರ್ಷಿ ವಾಲ್ಮೀಕಿ, ವೀರ ಮದಕರಿ ನಾಯಕ ಹಾಗೂ ನಟ ಸುದೀಪ್ ಅವರ ಫೋಟೋಗಳನ್ನು ಇಟ್ಟು ಪ್ರತಿದಿನ ಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

'ಕಿಚ್ಚ ಸಿದ್ದರಾಜು' ಎಂದೇ ಖ್ಯಾತಿ

28 ವರ್ಷದ ಸಿದ್ದರಾಜು ಅವರು ಐಸ್ ಕ್ಯಾಂಡಿ ಮಾರಾಟ ಮಾಡುವ ಕಾಯಕ ಮಾಡುತ್ತಿದ್ದಾರೆ. ಸುದೀಪ್ ಅವರ ಮೇಲಿನ ಇವರ ಅಭಿಮಾನವನ್ನು ಕಂಡು ಸ್ಥಳೀಯರು ಇವರನ್ನು ಪ್ರೀತಿಯಿಂದ 'ಕಿಚ್ಚ ಸಿದ್ದರಾಜು' ಎಂದೇ ಗುರುತಿಸುತ್ತಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ