ಬೆಂಗಳೂರು: ಖ್ಯಾತ ನಟ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್ ಆಯೋಜಿಸಿರುವ ಆನ್ ಇವಿನಿಂಗ್ ವಿತ್ ಶಾರುಖ್ ಖಾನ್ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಅವರು ಭಾಗವಹಿಸಲಿದ್ದಾರೆ.
ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಜೂನ್ 25ರಂದು ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದೆ. ಅಧಿಕೃತವಾಗಿ ನೋಂದಾಯಿತ ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು.
ಈ ಕಾರ್ಯಕ್ರಮ ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದೆ. ಭಾಗವಹಿಸುವವರಿಗೆ ವಿಶಿಷ್ಟ ಅನುಭವ ನೀಡಲಿದೆ ಎಂದು ರೋಹನ್ ಕಾರ್ಪೊರೇಷನ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೇರೊ ತಿಳಿಸಿದ್ದಾರೆ.


