ಟಾಲಿವುಡ್ ಸ್ಟಾರ್ ನಟಿ ಸಮಂತಾ ತಮ್ಮ ಜೀವನದ ಅತ್ಯಂತ ಸಂತಸದ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.
ಇತ್ತೀಚೆಗಷ್ಟೇ ತಮ್ಮ ಬೇಬಿ ಬಂಪ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದರು.
My Six Pack… I'll See You When I See You" ಎಂಬ ಹಾಸ್ಯಮಯ ಕ್ಯಾಪ್ಷನ್‌ನೊಂದಿಗೆ ಹಂಚಿಕೊಂಡಿದ್ದ ಆ ಪೋಸ್ಟ್ ಭಾರೀ ವೈರಲ್ ಆಗಿತ್ತು.
ಇದೀಗ ಮತ್ತೊಂದು ವಿಡಿಯೋ ಹಂಚಿಕೊಂಡಿರುವ ಸಮಂತಾ ಮತ್ತೆ ಸುದ್ದಿಯಲ್ಲಿದ್ದಾರೆ.
ಗರ್ಭಾವಸ್ಥೆಯಲ್ಲಿಯೂ ತಮ್ಮ ಫಿಟ್‌ನೆಸ್‌ಗೆ ಹೆಚ್ಚಿನ ಆದ್ಯತೆ ನೀಡುತ್ತಾ ವ್ಯಾಯಾಮ ಮುಂದುವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗರ್ಭಾವಸ್ಥೆಯಲ್ಲೂ ವರ್ಕೌಟ್
ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಜೂನ್ ತಿಂಗಳ ಫೋಟೋ ಡಂಪ್ ಹಂಚಿಕೊಂಡಿದ್ದಾರೆ. ಅದರಲ್ಲಿ ಗರ್ಭಾವಸ್ಥೆಯಲ್ಲಿ ಜಿಮ್‌ನಲ್ಲಿ ಮಾಡುತ್ತಿರುವ ವರ್ಕೌಟ್ ವಿಡಿಯೋ ಕೂಡ ಸೇರಿದೆ.ವಿಡಿಯೋದಲ್ಲಿ ಸಮಂತಾ ಮೇಲ್ಭಾಗದ ದೇಹದ (Upper Body) ವ್ಯಾಯಾಮ ಮಾಡುತ್ತಿರುವುದು ಕಾಣಿಸುತ್ತದೆ.
ರಾಡ್‌ಗೆ ಕಟ್ಟಿದ ಕೇಬಲ್ ಬಳಸಿ ವ್ಯಾಯಾಮ ಮಾಡುತ್ತಿರುವ ಅವರು, ಪ್ರತಿ ಸೆಟ್ ಬಳಿಕ ಸ್ವಲ್ಪ ವಿಶ್ರಾಂತಿ ಪಡೆಯುತ್ತಿರುವ ದೃಶ್ಯವೂ ಇದೆ. ಈ ವೇಳೆ ಅವರ ಬೇಬಿ ಬಂಪ್ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.


