LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪತಿಯೊಂದಿಗೆ ಮಾತನಾಡುತ್ತಲೇ ನೇಣಿಗೆ ಶರಣಾದ ನಟಿ ಸುಭಾಷಿಣಿ

Advertisement

ಚೆನ್ನೈ: ತಮಿಳುನ ಖ್ಯಾತ ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿದ್ದಾಗಲೇ ಸುಭಾಷಿಣಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಶ್ರೀಲಂಕಾ ಮೂಲದವರಾದ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ಹಲವು ಧಾರಾವಾಹಿಗಳಲ್ಲಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಿದ್ದರು.


2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.


ಆದರೆ ಸಿನಿಮಾ ಚಿತ್ರೀಕರಣಕ್ಕಾಗಿ ಚೆನ್ನೈಗೆ ಬಂದು ಹೋಗುತ್ತಿದ್ದರು. ಚೆನ್ನೈನ ಪೊರೂರು ಬಳಿಯ ಅಯ್ಯಪ್ಪಂತಂಗಲ್ ಎಂಬಲ್ಲಿ ಅಪಾರ್ಟ್ ಮೆಂಟ್ ವೊಂದರಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.


ಮಾರ್ಚ್ 3ರಂದು ಚೆನ್ನೈನ ಮನೆಗೆ ಬಂದಿದ್ದರು. ಏಪ್ರಿಲ್ 5ರಂದು ರಾತ್ರಿ ಸುಭಾಷಿಣಿ ತನ್ನ ಬಾಡಿಗೆ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಆತ್ಮಹತ್ಯೆಗೂ ಮುನ್ನ ಅವರು ಪತಿಯೊಂದಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ಇಬ್ಬರ ನಡಿವೆ ವಾಗ್ವಾಅದ ನಡೆದಿದೆ. ಪತಿ ವಿಡಿಯೋ ಕಾಲ್ ನಲ್ಲಿರುವಾಗಲೇ ಸುಭಾಷಿಣಿ ನೇಣಿಗೆ ಕೊರಳೊಡ್ಡಿದ್ದಾರೆ.


ತಕ್ಷಣ ಅವರ ಪತಿ ಅಪಾರ್ಟ್ ಮೆಂಟ್ ನ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಪೊರೂರು ಪೊಲೀಸರುಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸುವಷ್ಟರಲ್ಲಿಯೇ ಸುಭಾಷಿಣಿ ಕೊನೆಯುಸಿರೆಳೆದಿದ್ದರು.


ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಯಲಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ