Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ಸ್ಯಾಂಡಲ್ ಸೋಪಗೆ ನಟಿ ತಮನ್ನಾ ರಾಯಭಾರಿ : ಸರ್ಕಾರದ ವಿರುದ್ಧ ನೆಟ್ಟಿಗರ ಆಕ್ರೋಶ

Advertisement
ಬೆಂಗಳೂರು : ಅಂತಿಮವಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಮೈಸೂರು ರೇಷ್ಮೆ ಸೀರೆ ಉಟ್ಟು ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ತಮನ್ನಾ ಭಾಟಿಯಾ ರಾಯಭಾರಿಯಾಗಿರುವ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು ವಿವಿಧ ಪತ್ರಿಕೆಗಳಲ್ಲಿ ಮಂಗಳವಾರ ಪ್ರಕಟವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರಕ್ಕೆ ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕ ವಿಚಾರವೇ ಬಹಳ ಚರ್ಚೆಗೆ ಕಾರಣವಾಗಿತ್ತು. ಆದರೆ ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸರ್ಕಾರ ಅವರನ್ನೇ ಅಂತಿಮಗೊಳಿಸಿತ್ತು.

ಮಂಗಳವಾರ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು ನೋಡಿದ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಕರ್ನಾಟಕದ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಖಾತೆ ಸಚಿವ ಎಂ.ಬಿ.ಪಾಟೀಲ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, 'ಶತಮಾನಕ್ಕೂ ಮೀರಿದ ಪರಂಪರೆ, ಭವಿಷ್ಯವನ್ನೇ ಗುರಿಯಾಗಿಟ್ಟ ದೃಢ ಸಂಕಲ್ಪ! ನಾಲ್ವಡಿ ಕೃಷ್ಣರಾಜ ಒಡೆಯರ್- ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ದೂರದೃಷ್ಟಿಯಿಂದ ಹುಟ್ಟಿದ ಕೆ.ಎಸ್.ಡಿ.ಎಲ್ ಇಂದು ಹೊಸ ಯುಗಕ್ಕೆ ಕಾಲಿಡುತ್ತಿದೆ' ಎಂದು ಹೇಳಿದ್ದಾರೆ.

'ಮೈಸೂರು ಸ್ಯಾಂಡಲ್ ಸೋಪ್ ಗೆ ನವೀನ ರೂಪ, ಉತ್ತರ ಭಾರತವನ್ನೂ ಮತ್ತಷ್ಟು ವ್ಯಾಪಕವಾಗಿ ತಲುಪುವ ಮಹತ್ವಾಕಾಂಕ್ಷೆಯೊಂದಿಗೆ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿಯಾಗಿ ನೇಮಕ. ಡಿಜಿಟಲ್ ಮಾರುಕಟ್ಟೆ, ರಫ್ತು ವಿಸ್ತರಣೆ-ಎಲ್ಲವನ್ನೂ ಒಟ್ಟುಗೂಡಿಸಿ 2030ರ ಹೊತ್ತಿಗೆ ₹5,000 ಕೋಟಿ ವಹಿವಾಟಿನ ಗುರಿ. ಕರ್ನಾಟಕದ ಸರ್ಕಾರಿ ಸಂಸ್ಥೆ, ರಾಷ್ಟ್ರಮಟ್ಟದ ಬ್ರ್ಯಾಂಡ್ ಆಗುವ ದಿಟ್ಟ ಹೆಜ್ಜೆ' ಎಂದು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ