Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ ವೈಷ್ಣವಿಗೌಡ, ಅನುಕೂಲ್ ಮ್ಯಾರೆಜ್ ಫಿಕ್ಸ್

Advertisement
ನಟಿ ವೈಷ್ಣವಿಗೌಡ  ಅವರು ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡಿದ್ದಾರೆ. ಅವರು ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನಟಿ ನಿಶ್ಚಿತಾರ್ಥ ಆಗಿರೋದು ಅಭಿಮಾನಿಗಳಿಗೆ ಶಾಕ್ ಹಾಗೂ ಖುಷಿ ಎರಡನ್ನೂ ನೀಡಿದೆ. ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆಗಳು ಬರುತ್ತಿವೆ.

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಸಾಕಷ್ಟು ಮದುವೆ ಆಫರ್​ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಎಂಗೇಜ್​ಮೆಂಟ್ ಫೋಟೋ ಹಾಗೂ ವಿಡಿಯೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.



ವೈಷ್ಣವಿ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಧಾರಾವಾಹಿಯ ಕಲಾವಿದೆ ಮೇಘನಾ ಶಂಕರಪ್ಪ ಅವರು ಇತ್ತೀಚೆಗೆ ವಿವಾಹ ಆಗಿದ್ದರು. ಈಗ ಧಾರಾವಾಹಿ ತಂಡದಲ್ಲಿ ಮತ್ತೊಂದು ಮದುವೆ ನೆರವೇರುತ್ತಿದೆ.

ಹುಡುಗ ಯಾರು : ವೈಷ್ಣವಿ ಗೌಡ ಅವರು ಮದುವೆ ಆಗುತ್ತಿರುವ ಹುಡುಗನ ಹೆಸರು ಅನುಕೂಲ್​ ಎಂದು. ಅವರು ತಮ್ಮದೇ ಆದ ಉದ್ಯಮ ಹೊಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ವೈಷ್ಣವಿ ಅವರು ಬಣ್ಣದ ಲೋಕದವರನ್ನು ಬಿಟ್ಟು ಹೊರಗಿನವರನ್ನು ಕೈ ಹಿಡಿಯುತ್ತಿದ್ದಾರೆ.


ಅದ್ದೂರಿ ಎಂಗೇಜ್​ಮೆಂಟ್:


ವೈಷ್ಣವಿ ಗೌಡ ಅವರು ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮದುವೆ ಹಾಗೂ ಎಂಗೇಜ್​ಮೆಂಟ್ ಬಗ್ಗೆ ಅವರು ತಮ್ಮದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಅವರು ಅಂದುಕೊಂಡ ರೀತಿಯಲ್ಲೇ ನಿಶ್ಚಿತಾರ್ಥ ನೆರವೇರಿದೆ ಎಂದು ಹೇಳಲಾಗುತ್ತಿದೆ. ಈ ವಿವಾಹಕ್ಕೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಹಾಜರಿ ಹಾಕಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ