LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟ ಧನ್ವೀರ್ ಅಶ್ಲೀಲ ಆಡಿಯೋ ಬೆನ್ನಲ್ಲೇ ವಿಕೃತ ವಿಡಿಯೋ ವೈರಲ್

Advertisement

ಬೆಂಗಳೂರು: ನಟ ದರ್ಶನ್ ಪತ್ನಿ ಅವರೊಂದಿಗೆ ನಟ ಧನ್ವೀರ್ ಅವರಿಗೆ ಉಂಟಾಗಿರುವ ಭಿನ್ನಾಭಿಪ್ರಾಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.ಈ ಎಲ್ಲಾ ಬೆಳವಣಿಗೆಗಳ ನಡುವೆ ಈಗ ಮತ್ತೊಂದು ವಿವಾದ ನಟ ಧನ್ವೀರ್ ರನ್ನು ಸುತ್ತಿಕೊಂಡಿದೆ.

 ಹಣಕಾಸಿನ ವಿಚಾರದಲ್ಲಿ ವಿಜಯಲಕ್ಷ್ಮಿ ಅವರ ಜೊತೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ಸಂಬಂಧ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಅವರೊಂದಿಗೆ ಧನ್ವೀರ್ ನಡೆಸಿದ್ದ ಫೋನ್ ಮಾತುಕತೆಯ ಆಡಿಯೋಗಳು ಈಗಾಗಲೇ ಹೊರಬಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು.

ಆ ಆಡಿಯೋ ಪ್ರಕರಣದ ಬೆನ್ನಲ್ಲೇ ಇದೀಗ ಧನ್ವೀರ್ ಅವರಿಗೆ ಸಂಬಂಧಿಸಿದ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಈ ವಿಡಿಯೋದಲ್ಲಿ ತಮ್ಮ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

 ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಧನ್ವೀರ್ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST