Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈ ಎಲೆಕ್ಷನ್ ನಂತರ ಕೆಲ ಬಿಜೆಪಿ ಸ್ನೇಹಿತರು ಕಾಂಗ್ರೆಸ್ ಗೆ ಬರಲಿದ್ದಾರೆ : ಶಾಸಕ ಸವದಿ

Advertisement
ಹುಬ್ಬಳ್ಳಿ : ಬಿಜೆಪಿಯವರು ಒಂದೊಂದು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಈ ಹಬ್ಬದ ನಂತರ, ಆ ಹಬ್ಬದ ನಂತರದಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂದು ಸುಮ್ಮನೇ ಹೇಳುತ್ತಾನೇ ಇರುತ್ತಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ದಸರಾ-ದೀಪಾವಳಿ ಎಲ್ಲವೂ ಮುಗಿತು.

ಸಿಎಂ ಏನಾದ್ರೂ ಬದಲಾವಣೆ ಆಗಿದ್ದಾರಾ ಎಂದು ಪ್ರಶ್ನಿಸಿದ ಸವದಿ, ಪಂಚಮಿ ಬಂದರೂ ಅದನ್ನೇ ಹೇಳುತ್ತಾರೆ. ಇನ್ನು ಮೂರುವರೆ ವರ್ಷವೂ ಅದನ್ನೇ ಹೇಳುತ್ತಾ ಹೋಗುತ್ತಾರೆ.

ಅದಾದ ನಂತರ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ. ಆಗ ಒಂದೆರಡು ತಿಂಗಳು ಕಾದು ಮತ್ತೆ ಸಿಎಂ ಬದಲಾವಣೆಯ ಮಾತುಗಳನ್ನು ಆಡುತ್ತಾರೆ. ಇದನ್ನು ಬಿಟ್ಟು ಬೇರೆ ಮಾತು ಆಡಲು ಬಿಜೆಪಿಯವರಿಗೆ ಬೇರೆ ಅವಕಾಶವಿಲ್ಲ ಎಂದು ಛೇಡಿಸಿದರು.

ಇದಲ್ಲದೇ, ಉಪಚುನಾವಣೆ ಮುಗಿದ ಬಳಿಕ ಬಿಜೆಪಿಯ ಕೆಲ ನನ್ನ ಸ್ನೇಹಿತರು ಆ ಪಕ್ಷ ಬಿಟ್ಟು ಕಾಂಗ್ರೆಸ್​​​ಗೆ ಬರಲು ಸಿದ್ದರಾಗಿದ್ದು, ಅವರ ಹಿತವನ್ನೂ ನಾವು ಕಾಪಾಡಬೇಕಾಗುತ್ತದೆ. ಅವರು ಕಾಂಗ್ರೆಸ್​​ಗೆ ಬರಲು ಸಿದ್ಧತೆ ನಡೆಸಿದ್ದಾರೆ ಎಂದು ಸ್ಫೋಟಕ ಸಂಗತಿಯನ್ನು ಸವದಿ ಇದೇ ವೇಳೆ ರಿವೀಲ್​ ಮಾಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ