ಬೆಂಗಳೂರು: ಆಕಾಶದಲ್ಲಿ ಹಾರುತ್ತಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆದರೆ, ಪೈಲಟ್‌ಗಳ ಸಮಯೋಚಿತ ಕ್ರಮದಿಂದ 148 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.
ಇದರಿಂದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನದಲ್ಲಿದ್ದ 148 ಪ್ರಯಾಣಿಕರ ಸುರಕ್ಷತೆಯೇ ಮುಖ್ಯವಾಗಿದ್ದು, ವಿಮಾನವನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಅದೃಷ್ಟವಶಾತ್, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸಂಭವಿಸಬಹುದಾಗಿದ್ದ ಆತಂಕಕಾರಿ ಘಟನೆಯಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.


