Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಷರ ದಾಸೋಹ ಕಾರ್ಮಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಒತ್ತಾಯಿಸಿ ಮನವಿ.

Advertisement
ಸಿರುಗುಪ್ಪ :- ನಗರದ ತಾಲೂಕು ಪಂಚಾಯಿತಿ ಕಛೇರಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ತಾಲೂಕು ಸಮಿತಿಯಿಂದ ಬಿಸಿಯೂಟ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಸುಜಾತ ಅವರ ಮೂಲಕ ಇ.ಓ ಅವರಿಗೆ ಮನವಿ ಸಲ್ಲಿಸಲಾಯಿತು.


ಬಿಸಿಯೂಟ ಕಾರ್ಮಿಕರ ಸಂಘದ ಜಿಲ್ಲಾ ಸಲಹೆಗಾರರಾದ ನಾಗರತ್ನ.ಎಸ್.ಜಿ ಅವರು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಷ್ಠಿತ ಮದ್ಯಾಹ್ನ ಬಿಸಿಯೂಟ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ತಯಾರಿಸುವವರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.



ಕಳೆದ ಏಪ್ರಿಲ್ ಮತ್ತು ಮೇ ತಿಂಗಳುಗಳ ಬಾಕಿಯಿರುವ ಗೌರವಧನವನ್ನು ಕೂಡಲೇ ಪಾವತಿಸಬೇಕು. ಮೊಟ್ಟೆ ಸುಲಿದ ಕೂಲಿ ಹಣವನ್ನು ಬಿಸಿಯೂಟ ಕಾರ್ಮಿಕರಿಗೆ ಖಾತ್ರಿ ಮಾಡಬೇಕು.ಬಿಸಿಯೂಟ ತಯಾರಿ, ಬಡಿಸುವುದು ಹೊರತುಪಡಿಸಿ ಹೆಚ್ಚುವರಿ ಕೆಲಸಗಳ ಒತ್ತಡವನ್ನು ಹೇರದಂತೆ ಸಭೆ ಕರೆದು ಶಾಲೆಗಳ ಮುಖ್ಯಸ್ಥರಿಗೆ ಮಾಗದರ್ಶನ ಮಾಡಬೇಕು.

ಇಸ್ಕಾನ್ ಅಕ್ಷಯ ಪಾತ್ರೆಯಂತಹ ಕೇಂದ್ರೀಕೃತ ಅಡುಗೆ ವ್ಯವಸ್ಥೆಗೆ ಬಿಸಿಯೂಟದ ವ್ಯವಸ್ಥೆಯನ್ನು ನೀಡದೇ ಆಯಾ ಶಾಲೆಗಳಲ್ಲೇ ತಯಾರಿಕೆಗೆ ಅನುವು ಮಾಡಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆಯನ್ನು ಸುಭದ್ರಗೊಳಿಸಬೇಕು.

ಮಕ್ಕಳ ಸಂಖ್ಯೆಯ ಕೊರತೆಯ ನೆಪದಿಂದ ಕಾರ್ಯಕರ್ತೆಯರನ್ನು ಮನೆಗೆ ಕಳುಹಿಸದೇ ಬೇರೆ ಶಾಲೆಗೆ ಕೆಲಸಕ್ಕೆ ನಿಯೋಜಿಸಬೇಕು.ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನವನ್ನು ನೌಕರರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ಅಡುಗೆ ತಯಾರಿಸುವ ಕಾರ್ಮಿಕರಿಗೆ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ತಾಲೂಕು ಸಮಿತಿಯ ಅಧ್ಯಕ್ಷ ಸುರೇಶ.ಜಿ, ಉಪಾಧ್ಯಕ್ಷೆಯರಾದ ಲಕ್ಷ್ಮಿ, ರುದ್ರಮ್ಮ, ಕಾರ್ಯದರ್ಶಿ ಗೀತಾ ಸಿರಿಗೇರಿ, ಸದಸ್ಯರಾದ ವಿಜಯಲಕ್ಷ್ಮಿ, ಶೇಖಮ್ಮ, ಶಿವಮ್ಮ, ಸುಮಂಗಲಮ್ಮ, ಶೇಖನ್‌ಬಿ, ಇನ್ನಿತರರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ