Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಪ್ರಸಿದ್ಧ ಉಳವಿ ಜಾತ್ರೆಗೆ ಸಕಲ ಸಿದ್ಧತೆ

Advertisement
ಜೋಯಿಡಾ : ಜೋಯಿಡಾ ತಾಲೂಕಿನ ಉತ್ತರ ಕರ್ನಾಟಕ ಭಾಗದ ಜನರ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾದ ಶ್ರೀ ಉಳವಿ ಚೆನ್ನಬಸವಣ್ಣನ ಜಾತ್ರೆ ಫೆ 3 ರಿಂದ ಪ್ರಾರಂಭವಾಗಿ ಫೆ 15 ರ ವರೆಗೆ ನಡೆಯಲಿದ್ದು 13 ರಂದು ಮಹಾ ರಥೋತ್ಸವ ಜರುಗಲಿದೆ, ಜಾತ್ರೆಯಲ್ಲಿ ಸಂಪೂರ್ಣವಾಗಿ ಸರಾಯಿ ಮತ್ತು ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ ಎಂದು ಉಳವಿ ಟ್ರಸ್ಟ್ ಕಮಿಟಿ ಅಧ್ಯಕ್ಷ ಸಂಜಯ ಕಿತ್ತೂರ ಉಳವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಟ್ರಸ್ಟ್ ಕಮಿಟಿ ಉಪಾಧ್ಯಕ್ಷ ಪ್ರಕಾಶ ಕಿತ್ತೂರ ‌ಮಾತನಾಡಿ ರಥೋತ್ಸವದ ದಿನ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಎಮ್ ಎಲ್ ಸಿ ಗಣಪತಿ ಉಳ್ವೇಕರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ತಾಲೂಕಾ ಆಡಳಿತ ಭಾಗವಹಿಸಲಿದೆ, ಜಾತ್ರೆಗೆ ಬರುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಉಳವಿ ಪಂಚಾಯತ ಮತ್ತು ನಮ್ಮ ಟ್ರಸ್ಟ್ ಕಮಿಟಿ ವತಿಯಿಂದ ಮಾಡಲಾಗಿದೆ, ಮುಖ್ಯವಾಗಿ ಜಾತ್ರೆಗೆ ಹೆಚ್ಚಿನ ವಾಹನಗಳು ಬರುವುದರಿಂದ ಕಡಗರ್ಣಿ ಮೈದಾನ ಮತ್ತು ಉಳವಿ ಗದ್ದೆಯಲ್ಲಿ ವಾಹನದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ವಾಹನಗಳಿಗೆ ಮುಖ್ಯವಾಗಿ ಟ್ರಾಕ್ಟರ್ ಗಳಿಗೆ ರೆಡಿಯಮ್ ಬಳಸಬೇಕು , ಅಲ್ಲಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ,ಜಾತ್ರೆಯಲ್ಲಿ ಯಾರು ಬೆಲೆಬಾಳುವ ಬಂಗಾರ ಹಾಗೂ ಇನ್ನೀತರ ವಸ್ತುಗಳನ್ನು ಧರಿಸಿ ಬರಬೇಡಿ, ದೇವಸ್ಥಾನದ ಆವರಣ ಮತ್ತು ಅಗತ್ಯವಿದ್ದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ, ಎಲ್ಲರೂ ಪರಿಸರ ರಕ್ಷಣೆ ಮಾಡಬೇಕು, ಕಾಡಿನಲ್ಲಿ ಬೆಂಕಿ ಹಾಗೂ ಪ್ಲಾಸ್ಟಿಕ್ ಹಾಕುವ ಕೆಲಸ ಮಾಡಬಾರದು, ಚಕ್ಕಡಿಗಾಡಿಗಳು ನಿಧಾನವಾಗಿ ಬರಬೇಕು ,ಅರಣ್ಯ ಇಲಾಕೆ ಮತ್ತು ಪೋಲಿಸ್ ಇಲಾಕೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಳವಿ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ಮೋಕಾಶಿ, ಟ್ರಸ್ಟ್ ಕಮಿಟಿ ಸದಸ್ಯ ವಿರೇಶ್ ಕಂಬಳಿ, ಪ್ರಧಾನ ಅರ್ಚಕ ಕಲ್ಮಠ ಶಾಸ್ತ್ರಿ ಇದ್ದರು.

ವರದಿ : ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ