Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಎಲ್ಲಾ ನಿರ್ಭಂಧ ತಕ್ಷಣದಿಂದಲೇ ತೆರವು 

Advertisement

ನವದೆಹಲಿ: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಯುದ್ಧ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG) ಪೂರೈಕೆಯ (Good News) ಮೇಲೆ ಹೇರಲಾಗಿದ್ದ ಎಲ್ಲಾ ರೀತಿಯ ನಿಯಂತ್ರಣಗಳನ್ನು ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ.

ಜಾಗತಿಕ ಮಟ್ಟದಲ್ಲಿ ಪರಿಸ್ಥಿತಿ ಸುಧಾರಿಸಿರುವ ಕಾರಣ, ವಾಣಿಜ್ಯ ಸಿಲಿಂಡರ್‌ಗಳ ಮಾರಾಟದ ಮೇಲಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ನಿರ್ಧರಿಸಿದ್ದು, ಈ ಕುರಿತು ಎಲ್ಲಾ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ರವಿ ಕೋಟಾ ಅವರು ಗುರುವಾರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಯುದ್ಧದ ಪೂರ್ವದಲ್ಲಿದ್ದ ಹಳೇ ಮಟ್ಟಕ್ಕೆ ಮರುಸ್ಥಾಪಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. 

ಕೇಂದ್ರ ಪೆಟ್ರೋಲಿಯಂ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಅಧಿಕೃತ ಪತ್ರವನ್ನು ಕೂಡ ಅವರು ಹಂಚಿಕೊಂಡಿದ್ದಾರೆ. 

ಇದರ ಅನ್ವಯ, ಗೃಹಬಳಕೆಯಲ್ಲದ ಅಥವಾ ವಾಣಿಜ್ಯ ಉದ್ದೇಶದ ಪ್ಯಾಕ್ಡ್ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿದ್ದ ಎಲ್ಲಾ ವಲಯವಾರು ನಿರ್ಬಂಧಗಳನ್ನು ಹಿಂಪಡೆಯಲಾಗಿದ್ದು, ಬಲ್ಕ್ ಎಲ್‌ಪಿಜಿ ಪೂರೈಕೆಯನ್ನು ಶೇಕಡಾ 50 ರಷ್ಟು ಮರುಸ್ಥಾಪಿಸಲು ತೈಲ ಕಂಪನಿಗಳಿಗೆ ಸೂಚಿಸಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST