ಜಮಖಂಡಿ : ತಾಲೂಕಿನ ಸಾವಳಗಿ ಗ್ರಾಮದ ಹಲವು ಕಡೆಗಳಲ್ಲಿ ಕಂದಾಯ ಇಲಾಖೆಗೆ ಸೇರಿದ ಜಾಗ ಒತ್ತುವರಿಯಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದರೂ, ಜಮಖಂಡಿ ತಹಸೀಲ್ದಾರ ಅನಿಲ ಬಡಿಗೇರ ಅವರಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕವಾಗಿ ಮನವಿ ನೀಡಿದ್ದರು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಈ ಕುರಿತು ತಹಶೀಲ್ದಾರರನ್ನು ಪ್ರಶ್ನಿಸಿದಾಗ, ಸ್ಪಷ್ಟ ಉತ್ತರ ನೀಡುವ ಬದಲು ಉಡಾಪೆಯಾಗಿ ಪ್ರತಿಕ್ರಿಯಿಸಿದ್ದಾರೆ ಇದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ.
ಸರ್ಕಾರಿ ಜಾಗದ ರಕ್ಷಣೆ ಕಂದಾಯ ಇಲಾಖೆಯ ಜವಾಬ್ದಾರಿಯಾಗಿದ್ದು, ಒತ್ತುವರಿ ಸಂಬಂಧಿಸಿದ ದೂರುಗಳ ಬಗ್ಗೆ ಅಧಿಕಾರಿಗಳು ತ್ವರಿತವಾಗಿ ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಬೇಕಾಗಿತ್ತು ಆದರೆ ಯಾವುದು ಕಾಣದ ಕೈಗಳ ಕೈವಾಡ ದಿಂದ ಉಡಾಪೆ ಉತ್ತರ ನೀಡುತ್ತಾ ದಿನಗಳನ್ನು ಕಳೆಯುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ
ಈ ಪ್ರಕರಣದಲ್ಲಿ ಜಿಲ್ಲಾಡಳಿತ ಮಧ್ಯಪ್ರವೇಶಿಸಿ, ಒತ್ತುವರಿ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
ಕಂದಾಯ ಇಲಾಖೆಯ ಜಾಗ ಒತ್ತುವರಿ ಮಾಡಿದ್ದವರ ವಿರುದ್ಧ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ? ಎಂಬುದನ್ನು ಕಾದು ನೋಡಬೇಕಾಗಿದೆ.
ವರದಿ :ಅಜಯ ಕಾಂಬಳೆ


