ಕಾರವಾರ: ರಕ್ಷಕನಾಗಬೇಕಿದ್ದ ಪೊಲೀಸಪ್ಪನೇ ಅತ್ಯಾಚಾರದಂತಹ ಹೇಯ ಕೃತ್ಯ ವೆಸಗಿದ್ದಾನೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಓರ್ವನನ್ನು ಬಂಧಿಸಲಾಗಿದೆ.
ಅಭಿನಂದನ್ ಗೌಡ ಬಂಧಿತ ಪಿಎಸ್ ಐ. 16 ವರ್ಷದ ಬಾಲಕಿಯನ್ನ ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ.
ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ಪಿಎಸ್‌ಐನನ್ನು ಬಂಧಿಸಲಾಗಿದೆ.
ಬಂಧಿತ ಪಿಎಸ್‌ಐ ಅಭಿನಂದನ್ ಗೌಡ ರಾಮನಗರ ಜಿಲ್ಲೆಯ ಕನಕಪುರ ಮೂಲದವನು. ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ಎಲ್‌ಎನ್‌ಓ ಆಗಿ ವರ್ಗಾವಣೆಗೊಂಡಿದ್ದ. ಆರೋಪಿಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಠಾಣೆಯಲ್ಲಿ ಅಭಿನಂದನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.


