Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಕುಂಭ ಮೇಳ ಭಕ್ತರಿಗೆ ಉಚಿತ ಪ್ರಯಾಣ, ಊಟ ಹಾಗೂ ಔಷಧಿಗಳ ಘೋಷಿಸಿದ ಅಂಬಾನಿ 

Advertisement
ಪ್ರಯಾಗ್ ರಾಜ್ : ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಅತ್ಯಂತ ಪವಿತ್ರವಾದ ಉತ್ಸವಗಳಲ್ಲಿ ಪ್ರಮುಖವಾದ ಮಹಾ ಕುಂಭಮೇಳ ಈ ವರ್ಷ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿದೆ. ಮಹಾಕುಂಭ ಮೇಳಕ್ಕೆ ತೆರಳುವ ಭಕ್ತರ ಸಂಖ್ಯೆ ದಿನೇ ದಿನ ಹೆಚ್ಚಾಗುತ್ತಿದೆ.

ದೇಶದ ವಿವಿಧ ಕಡೆಯಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ರೈಲು, ವಿಮಾನದ ವ್ಯವಸ್ಥೆ ಮಾಡಲಾಗಿದೆ. ಇದರ ನಡುವೆ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರಿ ಮಹತ್ವದ ಘೋಷಣೆ ಮಾಡಿದೆ.


ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರಿ ಮಹಾಕುಂಭ ಮೇಳ ಭಕ್ತರಿಗೆ ಉಚಿತ ಪ್ರಯಾಣ, ಉಚಿತ ಊಟ ಹಾಗೂ ಉಚಿತ ಔಷಧಿಗಳ ತೀರ್ಥ ಯಾತ್ರಿ ಸೇವಾ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ಈಗಾಗಲೇ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ಆರಂಭಗೊಂಡಿದೆ.


ಈ ಕುರಿತು ಮಾತನಾಡಿರುವ ರಿಲಯನ್ಸ್ ಇಂಡಸ್ಟ್ರಿ ನಿರ್ದೇಶಕ ಅನಂತ್ ಅಂಬಾನಿ, ಮಹಾಕುಂಭ ಮೇಳ ಅತೀ ದೊಡ್ಡ ಹಿಂದೂ ಧರ್ಮದ ಆಧ್ಯಾತ್ಮಿಕ ಹಬ್ಬ. ಈ ಪುಣ್ಯ ದಿನಗಳಲ್ಲಿ ರಿಲಯನ್ಸ್ ಇಂಡಸ್ಟ್ರಿ, ಇಲ್ಲಿಗೆ ಆಗಮಿಸುತ್ತಿರುವ ಕೋಟ್ಯಾಂತರ ಭಕ್ತರ ಆರೋಗ್ಯ, ಸುರಕ್ಷತೆ, ಪ್ರಯಾಣ, ಆಹಾರ ಕುರಿತು ಕಾಳಜಿ ವಹಿಸಲಿದೆ. ಈ ಮೂಲಕ ಭಕ್ತರ ಆಧ್ಯಾತ್ಮಿಕ ಪ್ರಯಾಣ ಸುಗಮವಾಗಿಸಲು ರಿಲಯನ್ಸ್ ನೆರವಾಗಲಿದೆ ಎಂದಿದ್ದಾರೆ.


ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಸಣ್ಣ ಸೇವೆ ನೀಡುವ ಅವಕಾಶ ಒದಗಿ ಬಂದಿರುವುದು ನಮ್ಮ ಸೌಭಾಗ್ಯ ಎಂದಿದ್ದಾರೆ. ಭಕ್ತರ ಆಧ್ಯಾತ್ಮಿಕತೆಯಲ್ಲಿ ರಿಲಯನ್ಸ್ ಸಣ್ಣ ಕೊಡುಗೆ ನೀಡುತ್ತಿದೆ. ಮಹಾಕುಂಭ ಮೇಳದ ಆಶೀರ್ವಾದದೊಂದಿಗೆ ಈ ಸೇವೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ