Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಲಕಲನೇರ್ಪು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಬೆಳ್ಳಿ ರಥದಲ್ಲಿ ಮೆರವಣಿಗೆ

Advertisement
ಚೇಳೂರು: ತಾಲೂಕಿನ ಚಿಲಕಲನೇರ್ಪು ಗ್ರಾಮದಲ್ಲಿ ಬುಧವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಅಂಬೇಡ್ಕರ್ ಯುವಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ, ಯುವಕರ ಬಳಗದಿಂದ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಸುಂದರವಾಗಿ ಅಲಂಕರಿಸಿದ್ದ ಬೆಳ್ಳಿ ರಥದಲ್ಲಿಟ್ಟು ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಯುವಕರು 'ಜೈ ಭೀಮ್' ಘೋಷಣೆಗಳನ್ನು ಕೂಗುತ್ತಾ, ಅಂಬೇಡ್ಕರ್ ಅವರ ಕ್ರಾಂತಿಗೀತೆಗಳಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಮಹಿಳೆಯರು ಮತ್ತು ಮಕ್ಕಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ನೀಡಿದರು.



ಈ ಸಂದರ್ಭದಲ್ಲಿ ಕುರ್ಲ ಕದಿರಪ್ಪ, ಗಿನ್ನಿ ಶ್ರೀನಿವಾಸ್, ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಿ.ಎಸ್. ರಾಮಾಂಜನೇಯ ಹಾಗೂ ಭಾಗ್ಯಮ್ಮ, ಬಿಎಸ್ಪಿ ಮುಖಂಡ ವೆಂಕಟರವಣ, ಪೋಸ್ಟ್ ಮಧುಸೂದನ, ವಿ. ರಾಮಾಂಜನೇಯ, ಬಳ್ಳಾರಿ ನರಸಿಂಹ, ಚಿಕ್ಕ ನರಸಿಂಹ, ಪೋಸ್ಟ್ ಮಾಸ್ಟರ್ ನರಸಿಂಹಪ್ಪ, ಮಾಜಿ ನಂಬರ್ ಅಂಜಿ, ಚಂದ್ರಮೌಲಿ, ವಾಟರ್ ಮ್ಯಾನ್ ನಾರಾಯಣಪ್ಪ, ಸಂಗಪ್ಪ ಸೇರಿದಂತೆ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ವರದಿ :ಯಾರಬ್. ಎಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ