LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಬೇಡ್ಕರ್ ಜಯಂತಿ ಸಿದ್ಧತೆ : ಅರ್ಥಪೂರ್ಣ ಆಚರಣೆಗೆ ಆಡಳಿತ ಪೂರ್ವಭಾವಿ ಸಭೆ

Advertisement
ಕಾಳಗಿ : ತಾಲೂಕು ಆಡಳಿತದ ನೇತೃತ್ವದಲ್ಲಿ ಬುಧವಾರ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 12:30ಕ್ಕೆ ಪೂರ್ವಭಾವಿ ಸಭೆ ನಡೆಯಿತು. ಏಪ್ರಿಲ್ 14, 2026ರಂದು ಆಚರಿಸಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಾರ್ಥಕ ಹಾಗೂ ಶಿಸ್ತಿನೊಂದಿಗೆ ಆಚರಿಸುವ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ತಹಸೀಲ್ದಾರ್ ಪೃಥ್ವಿರಾಜ ಪಾಟೀಲ್ ಅವರು, “ಪ್ರತಿವರ್ಷದಂತೆ ಈ ವರ್ಷವೂ ಅಂಬೇಡ್ಕರ್ ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಸಂಪೂರ್ಣ ಸಿದ್ಧವಾಗಿದೆ. ವಿಶೇಷ ಉಪನ್ಯಾಸಕರನ್ನು ಆಹ್ವಾನಿಸಿ, ವೇದಿಕೆ ಕಾರ್ಯಕ್ರಮವನ್ನು ರೂಪಿಸಲಾಗುವುದು” ಎಂದು ತಿಳಿಸಿದರು.
ಹಾಗೂ ಇದೆ ವೇಳೆ ಪಟ್ಟಣ ಪಂಚಾಯತ್ ಸಿಒ ಪಂಕಜಾ ಅವರು ಜಯಂತಿ ಕುರಿತು ಮಾತನಾಡಿದರು.

ಇದೇ ವೇಳೆ ಸಭೆಯಲ್ಲಿ ಹಾಜರಿದ್ದ ದಲಿತ ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಂಡರು. ಸಾರ್ವಜನಿಕರ ಪಾಲ್ಗೊಳ್ಳುವಿಕೆ ಹೆಚ್ಚಿಸುವುದು, ಯುವಜನತೆಗೆ ಅಂಬೇಡ್ಕರ್ ಅವರ ಆದರ್ಶಗಳನ್ನು ತಲುಪಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ಮಂಡಿಸಿದರು. ಈ ಎಲ್ಲಾ ಸಲಹೆಗಳನ್ನು ಪರಿಗಣಿಸಿ ಕಾರ್ಯಕ್ರಮವನ್ನು ರೂಪಿಸಲು ತಾಲೂಕು ಆಡಳಿತ ನಿರ್ಧರಿಸಿದೆ.

ತಾಲೂಕಿನ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ವಿವಿಧ ಇಲಾಖೆಗಳು ಕಡ್ಡಾಯವಾಗಿ ಅಂಬೇಡ್ಕರ್ ಜಯಂತಿಯನ್ನು ಆಚರಿಸುವಂತೆ ತಸೀಲ್ದಾರ್ ಅವರು ಸೂಚನೆ ನೀಡಿದರು , ಈ ಸಂದರ್ಭದಲ್ಲಿ : ತಾಲೂಕು ಪಂಚಾಯತ್, ಸಿಡಿಪಿಯೋ,ಕೆಇಬಿ,ಪಿಆರ್ಇ, ಪಿಡಬ್ಲ್ಯೂ ಡಿ, ಪೊಲೀಸ್,ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಡಾ ಬಿ ಆರ್ ಅಂಬೇಡ್ಕರ್ ರವರ 135ನೇ ಜಯಂತಿ ಸಮಿತಿ ಪದಾಧಿಕಾರಿಗಳು ಹಾಗೂ ದಲಿತ ಯುವ ಮುಖಂಡರು ಮತ್ತು ಹಿರಿಯ ಮುಖಂಡರು ವಿವಿಧ ಸಂಘಟನೆಯ ಅಧ್ಯಕ್ಷರುಗಳು ಇದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ