LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಕ್ರಮ ಮದ್ಯ ಮಾರಾಟ; ಕ್ರಮಕ್ಕೆ ಅಂಬೇಡ್ಕರ್ ಯುವ ಸೇನೆ ಒತ್ತಾಯ

Advertisement
ಸೇಡಂ: ತಾಲೂಕಿನ ಮುಧೋಳ ಗಡಿಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಹಿನ್ನೆಲೆ ಅಂಬೇಡ್ಕರ್ ಯುವ ಸೇನೆ ತಾಲೂಕು ಸಮಿತಿ ವತಿಯಿಂದ ಗುರುವಾರ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಅಧ್ಯಕ್ಷ ಗೋಪಾಲ್ ಎಲ್ ನಾಟೀಕಾರ ಮಾತನಾಡಿ, ‘ರೇಣುಕಾ ಮದ್ಯದ ಅಂಗಡಿಯಿಂದ ದಿನನಿತ್ಯ ಮದ್ಯವನ್ನು ಅಕ್ರಮವಾಗಿ ಗ್ರಾಮಗಳಿಗೆ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ದೂರಿದರು. ಅಬಕಾರಿ ನಿಯಮಗಳನ್ನು ಉಲ್ಲಂಘಿಸಿ ಮದ್ಯವನ್ನು ಸಂಗ್ರಹಿಸಿ ಮಧ್ಯವರ್ತಿಗಳ ಮೂಲಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

‘ಈ ರೀತಿಯ ಚಟುವಟಿಕೆಗಳು ಕರ್ನಾಟಕ ಅಬಕಾರಿ ಕಾಯ್ದೆ, 1965 ಹಾಗೂ ಸಂಬಂಧಿತ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದು ಆರೋಪಿಸಿದ್ದಾರೆ.

ಆದ್ದರಿಂದ, ಸಂಬಂಧಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಬೇಕು. ಅಕ್ರಮ ಮದ್ಯ ಸಂಗ್ರಹಣೆ ಹಾಗೂ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಗತ್ಯವಿದ್ದಲ್ಲಿ ಪರವಾನಿಗೆ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್, ಮುಧೋಳ ವಲಯ ಉಪಾಧ್ಯಕ್ಷ ಕೈಲಾಸ ಮೌರ್ಯ ಸೇರಿದಂತೆ ಅಂಬೇಡ್ಕರ್ ಯುವ ಸೇನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ