LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರು

Advertisement

ಹುಬ್ಬಳ್ಳಿ : ಹುಬ್ಬಳ್ಳಿ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರಿಗೆ, ವಿಶ್ರಾಂತಿ ಪಡೆಯುತ್ತಿರುವಾಗಲೇ ಅನಾರೋಗ್ಯ ಕಾಡಿದ್ದು, ಹೋಟೆಲ್‌ನಲ್ಲಿಯೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ಅಮಿತ್ ಶಾ ಅವರ ಜೊತೆಯಲ್ಲೇ ಆಗಮಿಸಿರುವ ವೈದ್ಯರ ವಿಶೇಷ ತಂಡ ಅವರಿಗೆ ಚಿಕಿತ್ಸೆ ಮುಂದುವರಿಸಿದೆ.

ವೈದ್ಯಕೀಯ ತಂಡದಲ್ಲಿರುವ ಡಾ. ಅರುಣ್ ಪ್ರತಾಪ್ ಅವರು ಗೃಹ ಸಚಿವರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಆರೈಕೆ ಒದಗಿಸುತ್ತಿದ್ದಾರೆ. ಸದ್ಯ ಹೋಟೆಲ್‌ನಲ್ಲೇ ಅವರಿಗೆ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ.

ಗೃಹ ಸಚಿವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ವಿಷಯ ತಿಳಿಯುತ್ತಿದ್ದಂತೆ, ಹಿರಿಯ ಅಧಿಕಾರಿಗಳು ಹೋಟೆಲ್‌ಗೆ ದೌಡಾಯಿಸಿದ್ದಾರೆ.

 ಧಾರವಾಡ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭುವನೇಶ ಪಾಟೀಲ್ ಹಾಗೂ ಐಜಿಪಿ ಲಾಬುರಾಮ್ ಅವರು ಹೋಟೆಲ್‌ಗೆ ಭೇಟಿ ನೀಡಿ, ಪರಿಸ್ಥಿತಿಯ ಮೇಲ್ವಿಚಾರಣೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರಿಗೆ ಸುಮಾರು ಎರಡು ಗಂಟೆಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಹೋಟೆಲ್‌ನಲ್ಲಿಯೇ ಚಿಕಿತ್ಸೆ ಹಾಗೂ ಅಗತ್ಯ ವಿಶ್ರಾಂತಿಯ ಬಳಿಕ, ಅವರು ತಮ್ಮ ಮುಂದಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಹುಬ್ಬಳ್ಳಿಯಿಂದ ನೇರವಾಗಿ ನವದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು