ಸಿಯ್ಲೆಟ್ (ಬಾಂಗ್ಲಾದೇಶ): ಆತಿಥೇಯ ಬಾಂಗ್ಲಾದೇಶ ಹಾಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವಿನ 2 ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಇಂದಿಲ್ಲಿ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡುತ್ತಿರುವ ವೆಸ್ಟ್ ಇಂಡೀಸ್ 3 ವಿಕೆಟ್ ಗೆ 71 ರನ್ ಗಳಿಸಿತ್ತು.
ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ವೆಸ್ಟ್ ಇಂಡೀಸ್ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.


