Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಬರ್ ವಂಚಕರ ಬೆದರಿಕೆಗೆ ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

Advertisement
ಬೆಳಗಾವಿವಿಡಿಯೋ ಕಾಲ್ ಮಾಡಿ ನಗ್ನ ‌ಚಿತ್ರಗಳಿವೆ ಎಂದು‌ ಸೈಬರ್ ವಂಚಕರ ಬೆದರಿಕೆಯಿಂದ ಹೆದರಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಖಾನಾಪುರ ‌ತಾಲೂಕಿನ ಬೀಡಿ ಗ್ರಾಮದಲ್ಲಿ ‌ನಡೆದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83), ಪಾವಿಯಾ ನಜರತ್ (79) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಸ್ವಸಹಾಯ ‌ಸಂಘದ ಮಹಿಳೆ ವೃದ್ಧ ದಂಪತಿ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ‌ನಂದಗಡ‌ ಠಾಣೆ ಪೊಲೀಸರ ಭೇಟಿ ನೀಡಿ, ಬೀಮ್ಸ್‌ನಲ್ಲಿ ಮರಣೋತ್ತರ ಪರೀಕ್ಷೆಗೆ ಸಿದ್ದತೆ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿಂದ ಸೈಬರ್ ಖದೀಮರು ವೃದ್ಧ ದಂಪತಿ ಬೆನ್ನು ಬಿದ್ದಿದ್ದರು. ಪೊಲೀಸರೆಂದು ಹೇಳಿಕೊಂಡು ನಿಮ್ಮ ನಗ್ನ ಚಿತ್ರಗಳಿವೆ ಎಂದು ವಿಡಿಯೋ ಕಾಲ್ ಮಾಡಿದ್ದರು. ಕೇಳಿದಷ್ಟು ಹಣ‌ ಕೊಡದಿದ್ದರೆ ನಗ್ನ ಚಿತ್ರಗಳನ್ನು ವೈರಲ್‌ ಮಾಡುವ ಬೆದರಿಕೆ ಹಾಕಿದ್ದರು. ಇದರಿಂದ ಈಗಾಗಲೇ ‌ಅವರ ಖಾತೆಗೆ ವೃದ್ಧ ದಂಪತಿ ಆರು ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದರು‌. ಹೀಗಿದ್ದರೂ ‌ಮತ್ತಷ್ಟು ಹಣ ನೀಡುವಂತೆ ಪೀಡಿಸಲು ಶುರು ಮಾಡಿದ್ದರಂತೆ.

ಖದೀಮರ‌‌ ಕಿರಿಕಿರಿಗೆ ಬೇಸತ್ತು ಮೊದಲು ಪಾವಿಯಾ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಪತ್ನಿ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಮನನೊಂದು ಪತಿ ಡಿಯಾಗೋ ಡೆತ್ ‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಕುವಿನಿಂದ ಕತ್ತು, ಕೈ ಕೊಯ್ದುಕೊಂಡು ಡಿಯಾಗೋ‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ