Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

Advertisement
ಚನ್ನಮ್ಮನ ಕಿತ್ತೂರು : ಸಾರ್ವಜನಿಕರಿಗೆ ನೇರವಾಗಿ ಸೇವೆ ನೀಡುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸ್ವಂತ ಕಚೇರಿ ನೀಡಬೇಕು, ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುರಕ್ಷತಾ ಸೌಲಭ್ಯಗಳನ್ನ ನೀಡಬೇಕು, ಗ್ರಾಮ ಆಡಳಿತ ಅಧಿಕಾರಿಗಳು ಕುಟುಂಬದವರೊಂದಿಗೆ ನೆಮ್ಮದಿಯಿಂದ ಜೀವನ ನಡೆಸಲು ಅಂತರ ಜಿಲ್ಲಾ ವರ್ಗಾವಣೆ, ಗ್ರಾಮ ಆಡಳಿತ ಬಡ್ತಿ, ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಾನೂನಿನ ರಕ್ಷಣೆ, ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಶೋಷಣೆಗಳು ನಿಲ್ಲಬೇಕು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಸೋಮವಾರ ದಿಂದ ಕರೆ ನೀಡಿದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಿತ್ತೂರ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಬೆಂಬಲ ನೀಡಿ ಕಿತ್ತೂರಿನ ಆಡಳಿತ ಸೌಧದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಿತ್ತೂರು ತಾಲೂಕು ಅಧ್ಯಕ್ಷರಾದ ಎಂ ಎ ಜಕಾತಿ ಅವರು ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಅಲ್ಮೆರಾ. ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ ( 12ಜಿಬಿ /256ಜಿಬಿ) ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್. ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹೇಳಿದರು.



ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎನ್‌.ಪಿ.ಎಸ್. ಸಂಘದ ಅಧ್ಯಕ್ಷರಾದ ರವೀಂದ್ರ ಡಿ.ಜಾಧವ ಅವರು ಮಾತನಾಡಿ ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್ ನಿಯಮ 16ಎ ರ ಉಪಖಂಡ (2) ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗ ವಿಶೇಷ ಮಾರ್ಗಸೂಚಿಯನ್ನು ರಚಿಸಬೇಕು. ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆ.ಸಿ.ಎಸ್.ಆರ್ ನಿಯಮ 16 ಎ ರ ಉಪಖಂಡ(2) ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಈ ಕೆಳಕಂಡಂತೆ ಹಲವಾರು ಸಮಸ್ಯೆಗಳು ಉಂಟಾಗಿರುತ್ತೆದೆ. ಆದ್ದರಿಂದ ಈ 16 ಎ ಉಪಖಂಡ(2)ನ್ನು ಮರುಸ್ಥಾಪಿಸುವಂತೆ ಅಥವಾ ಕಂದಾಯ ಇಲಾಖೆಯಲ್ಲಿ ಇತರೆ ಎಲ್ಲಾ ಇಲಾಖೆಗಳಲ್ಲಿ ಮಾಡಿರೀವಂತೆ ವರ್ಗಾವಣೆಯ ಮಾರ್ಗಸೂಚಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.
ನೌಕರರ ಸಂಘದ ಅಧ್ಯಕ್ಷರಾರ ಈರಣ್ಣ ಕರಡಿ ಅವರು ಮಾತನಾಡಿ ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂ ಗಳ ಪರಿಹಾರ ಮಂಜೂರ ಮಾಡಬೇಕು.



ಮಾತೃ ಇಲಾಖೆಯ ಎಲ್ಲಾ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ.ಅತಿವೃಷ್ಟಿ ಅನಾವೃಷ್ಟಿ ಇನ್ನಿತರ ಗುರುತರವಾದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ ಕೊಲೆ ಪ್ರಕರಣಗಳು ಈಗಾಗಲೇ ನಿರಕತರವಾಗಿ ನಡೆಯುತ್ತಿದ್ದು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿರುವಂತೆ 3000 ರೂ ಗಳನ್ನು ಆಪತ್ತಿನ ಭತ್ಯೆ( ರಿಸ್ಕ್ ಅಲೊಯನ್ಸ್ ) ನಿಡಬೇಕ ಎಂದು ಹೇಳಿದರು ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ.ಎಮ್ ಎ. ಜಕಾತಿ ಅಧ್ಯಕ್ಷರು ಗ್ರಾಮ ಆಡಳಿತ ಸಂಘ ಕಿತ್ತೂರು, ರವೀಂದ್ರ ಡಿ ಜಾಧವ ಅಧ್ಯಕ್ಷರು ಕ.‌ರಾ.ಸ.ನೌ.ಎನ್.ಪಿ.ಎಸ್.ಸಂಘ ಕಿತ್ತೂರು, ಲೋಕೇಶ ಉಳ್ಳಿಗೇರಿ ಕಾರ್ಯದರ್ಶಿ, ಮಂಜುನಾಥ ಹಂಚಿನಮನಿ ಸಂಘಟನಾ ಕಾರ್ಯದರ್ಶಿ, ಮಹಾಂತೇಶ ತಡಕೋಡ ಖಜಾಂಚಿ, ಗುರು ಬಂಡಿವಡ್ಡರ, ಬಬನ ತಳವಾರ, ಸಲೀಂ ಖುದ್ದುನವರ, ಆಶೋಕ ಪಟ್ಕಳ್, ಎಸ್ ಸಿ ಶಿದ್ದುನವರ, ಈರಣ್ಣ ಕರಡಿ ಅಧ್ಯಕ್ಷರು ನೌಕರರ ಸಂಘ, ಶ್ರಿದೇವಿ ಗಾಣಿಗೇರ, ಎಸ್ ಎನ್ ಪಟ್ಪಶೆಟ್ಪಿ ಗೌರವ ಅಧ್ಯಕ್ಷರು, ರವಿ ಎ ಲಗೌಡ್ರ, ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ