ಬೆಂಗಳೂರು : ಸಿಟಿ ಸ್ಪೆಷಲ್ ಬ್ರಾಂಚ್‌ನಲ್ಲಿ (CSB) ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ಪ ನಾಯಕರ್ (56) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
2010ರ ಬ್ಯಾಚ್‌ನ ಅಧಿಕಾರಿಯಾಗಿದ್ದ ಅವರು, ಇಲಾಖೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿವಪ್ಪ ನಾಯಕರ್ ಅವರಿಗೆ ನಿನ್ನೆ ರಾತ್ರಿ ದಿಢೀರ್ ಎಂದು ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಗರದ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 56 ವರ್ಷ ವಯಸ್ಸಿನ ಅಧಿಕಾರಿಯೊಬ್ಬರು ಅಕಾಲಿಕವಾಗಿ ನಿಧನರಾಗಿರುವುದು ಪೊಲೀಸ್ ಇಲಾಖೆಯಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

