ನವದೆಹಲಿ :ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.
ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ.ಜೂನ್ 1ರಂದು ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ.
ಜೂನ್ 8ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆ ದಿನ. ಜೂನ್ 9 ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ.
ಜೂನ್ 11ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂನ್ 18ರಂದು ರಾಅಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.


