Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ

Advertisement

 

ಸೇಡಂ:ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ಸೇಡಂ ಕ್ಷೇತ್ರದ ಶಾಸಕರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರನ್ನು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ (Deputy Chief Minister) ಹುದ್ದೆಗೆ ನೇಮಕ ಮಾಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಕಲ್ಯಾಣ ಕರ್ನಾಟಕ ಭಾಗದ ಜನತೆ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಗೌರವಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತಾರೆ.

ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ಹಲವು ವರ್ಷಗಳಿಂದ ಜನಸೇವೆ, ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ಆಡಳಿತಾತ್ಮಕ ಅನುಭವ, ಜನಪರ ಕಾರ್ಯಶೈಲಿ ಹಾಗೂ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ಉಪ ಮುಖ್ಯಮಂತ್ರಿ ಹುದ್ದೆ ನೀಡುವುದು ಸೂಕ್ತವಾಗಿದೆ.

ಅವರ ನೇಮಕದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಇನ್ನಷ್ಟು ಪ್ರಾತಿನಿಧ್ಯ ದೊರೆಯಲಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೊಸ ಶಕ್ತಿ ಸಿಗಲಿದೆ.

ಆದ್ದರಿಂದ, ಕೆಪಿಸಿಸಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರನ್ನು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡುವಂತೆ ವಿನಂತಿಸುತ್ತೇವೆ ಎಂದು ಸೇಡಂ ಕಾಂಗ್ರೆಸ್ ಯುವ ನಾಯಕರಾದ ಸಯ್ಯದ್ ಮಹಮ್ಮದ್ (ಶಾರುಖ್) ಅವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ. 

ವರದಿ :ವೆಂಕಟಪ್ಪ ಕೆ ಸುಗ್ಗಾಲ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಸೌದೆ ಅರೇಬಿಯಾ-ಉರುಗ್ವೆ ಪಂದ್ಯ ಡ್ರಾ ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ