Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಸಿ ವಿದ್ಯಾರ್ಥಿಗಳಿಗೆ ದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Advertisement

2026ನೇ ಸಾಲಿನ ಮಾರ್ಚ್, ಎಪ್ರಿಲ್ ನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅಂತಿಮ ವರ್ಷದ ಪಿ.ಯು.ಸಿ, 12ನೇ, ಐಟಿಐ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

ಹಾಗೂ ಮೆಟ್ರಿಕ ನಂತರದ ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು.

ಯಾವುದೇ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿcompartmental/carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನದ ಹಣ ಪಡೆಯಲು ಅರ್ಹರಿರುವುದಿಲ್ಲ.

ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಹಾಗೂ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಗ್ರೇಡ್-1, 2ರವರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST