Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಭಾಗ್ಯ ಯೋಜನೆಯಡಿ ವಿವಿದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Advertisement
ಬೆಂಗಳೂರು : ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ.

ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ