Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 800 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ 

Advertisement

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಸಕಾಲದಲ್ಲಿ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ ಒಟ್ಟು 800 ತಾಂತ್ರಿಕ ಹಾಗೂ ಫಾರ್ಮಸಿ ಹುದ್ದೆಗಳನ್ನು ಗುತ್ತಿಗೆ (Contract) ಆಧಾರದ ಮೇಲೆ ಭರ್ತಿ ಮಾಡಲು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದೆ.

ಯಾವ್ಯಾವ ಹುದ್ದೆಗಳು ಲಭ್ಯ?

ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ (Junior Lab Technicians): 400 ಹುದ್ದೆಗಳು

ಫಾರ್ಮಸಿ ಅಧಿಕಾರಿಗಳು (Pharmacy Officers): 400 ಹುದ್ದೆಗಳು

ಒಟ್ಟು 800 ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಫಾರ್ಮಸಿ ಅಧಿಕಾರಿಗಳು: ಡಿ.ಫಾರ್ಮಾ (D.Pharma) ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್ನಲ್ಲಿ ಕಡ್ಡಾಯವಾಗಿ ನೊಂದಾಯಿಸಿಕೊಂಡಿರಬೇಕು.

ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ: ಡಿಪ್ಲೊಮಾ ಇನ್ ಲ್ಯಾಬೊರೇಟರಿ ತಾಂತ್ರಿಕ (DMLT) ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷಗಳ ಒಳಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಈ ನೇಮಕಾತಿಯು ಯಾವುದೇ ಅರ್ಜಿ ಶುಲ್ಕವನ್ನು ಹೊಂದಿರುವುದಿಲ್ಲ. ಆಯಾ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಹಾಗೂ ರಾಜ್ಯ ಮಟ್ಟದ ದಿನಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ, ನೇರ ಸಂದರ್ಶನದ (Walk-in Interview) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆರೋಗ್ಯ ಇಲಾಖೆಯ ವೆಬ್ಸೈಟ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಇದರ ಸಂಪೂರ್ಣ ಮಾಹಿತಿ ಲಭ್ಯವಿರಲಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST