ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಭರ್ಜರಿ ಅವಕಾಶ ನೀಡಿದೆ. ಗ್ರೂಪ್-ಬಿ ನಾನ್-ಗೆಜೆಟೆಡ್ ಕೇಡರ್‌ನ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCA) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಈ ನೇಮಕಾತಿಯಡಿ ಒಟ್ಟು 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಡಿಗ್ರಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 2026ರ ಅಕ್ಟೋಬರ್ 28ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು 2026ರ ಸೆಪ್ಟೆಂಬರ್ 1ರ ವೇಳೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಡಿಗ್ರಿ ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಇಂಗ್ಲಿಷ್‌ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳ (35 WPM) ಟೈಪಿಂಗ್ ವೇಗ ಹೊಂದಿರಬೇಕು.
ವಯೋಮಿತಿ
2026ರ ಸೆಪ್ಟೆಂಬರ್ 1ರ ವೇಳೆಗೆ ಅಭ್ಯರ್ಥಿಗಳ ವಯಸ್ಸು 18ರಿಂದ 30 ವರ್ಷಗಳೊಳಗೆ ಇರಬೇಕು. ನಿಯಮಾನುಸಾರ ಎಸ್‌ಸಿ, ಎಸ್‌ಟಿ, ಒಬಿಸಿ, ದಿವ್ಯಾಂಗರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹1,500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ, ಮಾಜಿ ಸೈನಿಕರು ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ ₹750 ಶುಲ್ಕ ನಿಗದಿಯಾಗಿದೆ.
ಆಯ್ಕೆ ಪ್ರಕ್ರಿಯೆ
ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಒಟ್ಟು ನಾಲ್ಕು ಹಂತಗಳಲ್ಲಿ ನಡೆಯಲಿದೆ. ಆಬ್ಜೆಕ್ಟಿವ್ ಟೈಪ್ ಪರೀಕ್ಷೆಯನ್ನು ದೇಶದಾದ್ಯಂತ 131 ನಗರಗಳಲ್ಲಿ ನಡೆಸಲಾಗುತ್ತದೆ.ಇನ್ನು ಕಂಪ್ಯೂಟರ್ ಟೈಪಿಂಗ್ ಟೆಸ್ಟ್, ಡಿಸ್ಕ್ರಿಪ್ಟಿವ್ ಪರೀಕ್ಷೆ ಹಾಗೂ ಸಂದರ್ಶನವನ್ನು ದೆಹಲಿಯಲ್ಲಿ ನಡೆಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಸೂಕ್ತ.


