Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಖಾಲಿರುವ 3,395 ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Advertisement

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ರಾಜ್ಯದ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ.

 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಾತಿಯ ಪ್ರಮುಖ ವಿವರಗಳು ಈ ಕೆಳಗಿನಂತಿವೆ:

ಹುದ್ದೆಗಳ ವಿವರ ಹಾಗೂ ವರ್ಗೀಕರಣ

ಒಟ್ಟು 3,395 ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ:

ನೇರ ನೇಮಕಾತಿ (ಪುರುಷ): 2,266 ಹುದ್ದೆಗಳು

ನೇರ ನೇಮಕಾತಿ (ಮಹಿಳಾ): 755 ಹುದ್ದೆಗಳು

ಸೇವಾನಿರತ (ಪುರುಷ): 257 ಹುದ್ದೆಗಳು

ಸೇವಾನಿರತ (ಮಹಿಳಾ): 82 ಹುದ್ದೆಗಳು

ತೃತೀಯ ಲಿಂಗ ಅಭ್ಯರ್ಥಿಗಳು: 35 ಹುದ್ದೆಗಳು

ವೇತನ ಶ್ರೇಣಿ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100/- ಗಳ ವೇತನ ಶ್ರೇಣಿ ಇರಲಿದೆ.

ಶೈಕ್ಷಣಿಕ ವಿದ್ಯಾರ್ಹತೆ

ಅಭ್ಯರ್ಥಿಗಳು ಪಿ.ಯು.ಸಿ (PUC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು (ಸಿ.ಬಿ.ಎಸ್.ಇ / ಐ.ಎಸ್.ಸಿ / ಐ.ಟಿ.ಐ / 3 ವರ್ಷದ ಡಿಪ್ಲೊಮಾ) ಹೊಂದಿರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳ ಬಳಿ ಅಂಕಪಟ್ಟಿ ಇರಬೇಕು (ಫಲಿತಾಂಶಕ್ಕಾಗಿ ಕಾಯುತ್ತಿರುವವರಿಗೆ ಅವಕಾಶವಿಲ್ಲ).

ಎಸ್‌ಎಸ್‌ಎಲ್ಸಿ ಅಥವಾ ಅದಕ್ಕಿಂತ ಮೇಲಿನ ಹಂತದಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದದ ಅಭ್ಯರ್ಥಿಗಳಿಗೆ 150 ಅಂಕಗಳ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇರಲಿದ್ದು, ಅರ್ಹತೆಗಾಗಿ ಕನಿಷ್ಠ 50 ಅಂಕ ಗಳಿಸಬೇಕು.

ವಯೋಮಿತಿ (5 ವರ್ಷಗಳ ವಿಶೇಷ ಸಡಿಲಿಕೆ ಸೇರಿ)

ಸರ್ಕಾರದ ಆದೇಶದನ್ವಯ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದ್ದು, ಪರಿಷ್ಕೃತ ವಯೋಮಿತಿ ಹೀಗಿದೆ:

ಸಾಮಾನ್ಯ ಅರ್ಹತೆ (GM): ಗರಿಷ್ಠ 33 ವರ್ಷಗಳು.

SC / ST / ಪ್ರವರ್ಗ-1, 2A, 2B, 3A, 3B: ಗರಿಷ್ಠ 35 ವರ್ಷಗಳು.

ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳು: ಗರಿಷ್ಠ 38 ವರ್ಷಗಳು.

ಸೇವಾನಿರತ ಅಭ್ಯರ್ಥಿಗಳು: ಸಾಮಾನ್ಯ ವರ್ಗಕ್ಕೆ 38 ವರ್ಷ ಹಾಗೂ ಮೀಸಲಾತಿ ವರ್ಗಗಳಿಗೆ 40 ವರ್ಷಗಳು.

ಪ್ರಮುಖ ದಿನಾಂಕಗಳು

ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ: 08.06.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.07.2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 04.07.2026

ಲಿಖಿತ ಪರೀಕ್ಷೆ ದಿನಾಂಕ: 02.08.2026 (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ರವರೆಗೆ)

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ (GM) ಮತ್ತು ಇತರೆ ಹಿಂದುಳಿದ ಪ್ರವರ್ಗಗಳ ಅಭ್ಯರ್ಥಿಗಳಿಗೆ: ರೂ. 750/-

SC, ST, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ: ರೂ. 500/-

ಆಯ್ಕೆ ಪ್ರಕ್ರಿಯೆ ವಿಧಾನ

ಲಿಖಿತ ಪರೀಕ್ಷೆ (Offline-OMR ಮಾದರಿ): 100 ಪ್ರಶ್ನೆಗಳ 100 ಅಂಕಗಳ ಪರೀಕ್ಷೆ ಇರಲಿದ್ದು, ನೆಗೆಟಿವ್ ಮೌಲ್ಯಮಾಪನ (ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತ) ಇರುತ್ತದೆ. ಪರೀಕ್ಷೆಯಲ್ಲಿ ಕನಿಷ್ಠ 30 ಅಂಕ ಗಳಿಸುವುದು ಕಡ್ಡಾಯ.

ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ (PST & ET): ಲಿಖಿತ ಪರೀಕ್ಷೆಯಲ್ಲಿ ಅರ್ಹರಾದವರನ್ನು 1:5 ಅನುಪಾತದಲ್ಲಿ ಈ ಪರೀಕ್ಷೆಗೆ ಕರೆಯಲಾಗುತ್ತದೆ.

ಪುರುಷರಿಗೆ ಕನಿಷ್ಠ 168 ಸೆಂ.ಮೀ ಹಾಗೂ ಮಹಿಳೆಯರಿಗೆ 157 ಸೆಂ.ಮೀ ಎತ್ತರವಿರಬೇಕು. 1600 ಮೀಟರ್ ಓಟ (ಪುರುಷರಿಗೆ) ಮತ್ತು 400 ಮೀಟರ್ ಓಟ (ಮಹಿಳೆಯರಿಗೆ) ಸೇರಿದಂತೆ ವಿವಿಧ ದೈಹಿಕ ಪರೀಕ್ಷೆಗಳಿರುತ್ತವೆ.

ವೈದ್ಯಕೀಯ ಪರೀಕ್ಷೆ: ದೈಹಿಕ ಪರೀಕ್ಷೆಯಲ್ಲಿ ಪಾಸ್ ಆದವರನ್ನು 1:2 ಅನುಪಾತದಲ್ಲಿ ಕಿರುಪಟ್ಟಿ ಮಾಡಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ಸಹಾಯವಾಣಿ ಸಂಖ್ಯೆ 080-23460460 ಅನ್ನು ಸಂಪರ್ಕಿಸಬಹುದು.

 

                

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST