LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ನಮ್ಮ ಮೆಟ್ರೋದಲ್ಲಿ 50 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ 

Advertisement

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ BMRCL ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ( BMRCL )

ಹುದ್ದೆಗಳ ಸಂಖ್ಯೆ: 50

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 30,000 ರಿಂದ 32,950 ಗ್ರೇಡ್ NE-3

ವಿದ್ಯಾರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ಗಮನಿಸಿ:

ಡಿಸೆಂಬರ್‌ 31-2026 ರಂದು ಅಥವಾ ಅದಕ್ಕೂ ಮೊದಲು ನಿವೃತ್ತರಾಗಲಿರುವ ಮಿಲಿಟರಿ ಸಿಬ್ಬಂದಿಯೂ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು 31 ಅಕ್ಟೋಬರ್ 2026ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ ಮತ್ತು ನಿಮ್ಮ ಅರ್ಜಿಯ ಹಾರ್ಡ್ ಪ್ರತಿ 5-11-2026ರ ಸಂಜೆ 4 ಗಂಟೆಯೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿಗಳನ್ನು ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಉಪ ಪ್ರಧಾನ ವ್ಯವಸ್ಥಾಪಕರು (ಮಾನವ ಸಂಪನ್ಮೂಲ) ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ III ಮಹಡಿ, ಬಿಎಂಟಿಸಿ ಸಂಕೀರ್ಣ, ಕೆಎಚ್ ರಸ್ತೆ ಶಾಂತಿನಗರ ಬೆಂಗಳೂರು 560 027ಗೆ ಕಳುಹಿಸಬೇಕು.

ಆಯ್ಕೆ ಪ್ರಕ್ರಿಯೆ

ದೈಹಿಕ ಸಾಮರ್ಥ್ಯ ಪರೀಕ್ಷೆ

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅ. 09-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅ.31-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನ.5-2026

ಗುಲಾಬಿ ಬಣ್ಣದ ಮೆಟ್ರೋ ಸಾರ್ವಜನಿಕ ಸೇವೆಗೆ ರೆಡಿಯಾಗಿದ್ದು ಉದ್ಘಾಟನೆಗೆ ದಿನಾಂಕ ಹುಡುಕಲಾಗುತ್ತಿದೆ.

ಇದಕ್ಕಾಗಿ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರ ಕೂಡ ಬರೆದಿದ್ದಾರೆ. ಸುರಕ್ಷತಾ ಪರೀಕ್ಷೆಗಳು ನಡೆಯುತ್ತಿದ್ದು, ಕಂಡುಬಂದಿರುವ ದೋಷಗಳನ್ನು ಸರಿಪಡಿಸಲಾಗುತ್ತಿದೆ. 

ಇದರ ಬೆನ್ನಲ್ಲೇ ಈಗ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋದಲ್ಲಿ ಕಾರ್ಯನಿರ್ವಹಿಸಲು ಭದ್ರತಾ ಸಿಬ್ಬಂದಿಗಳನ್ನು ಹುಡುಕುತ್ತಿದೆ. ಅರ್ಹ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಿ ಕೆಲಸ ಗಿಟ್ಟಿಸಿಕೊಳ್ಳಿ. ಹೆಚ್ಚಿನ ಮಾಹಿತಿಗೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯತಮನನ್ನು ಗಲ್ಲಿಗೇರಿಸಿ : ಡೆತ್‌ನೋಟ್ ಬರೆದಿಟ್ಟು ಪ್ರಾಣ ಬಿಟ್ಟ ಶಿಕ್ಷಕಿ ಇನ್ನಿಂಗ್ಸ್ ಮುನ್ನಡೆಯನ್ನಾದರೂ ಪಡೆಯಲು ಕರ್ನಾಟಕ ಮತ್ತೇ ವಿಫಲ ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ : ಪ್ರಧಾನಿಗೆ ಭೇಟಿಗಾಗಿ ಸಮಯ ಕೋರಿದ ಸಿಎಂ ಹಿಂಗಾರು ಕೃಪೆಯಿಂದ ನೀರಿನ ಸಮಸ್ಯೆ ನಿವಾರಣೆ: ಕೋಡಿ ಶ್ರೀಗಳ ಭವಿಷ್ಯಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಜಿ. ಪರಮೇಶ್ವರ್ ಜಾಲಿರೈಡ್ ಇಡಿ ದೇಶದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ನೀಡಿದ್ದು ಕೇಂದ್ರ ಸರ್ಕಾರ: ಬಿ.ವೈ. ವಿಜಯೇಂದ್ರ ಎಲ್ಲರೂ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಿದೆ: ಡಿ. ಕೆ ಶಿವಕುಮಾರ್ ಪಾಕಿಸ್ತಾನ- ಇಂಗ್ಲೆಂಡ್ ಪಂದ್ಯ ಇಂದು ಭಾರತ- ಜಿಂಬಾಬೆ ಮಹಿಳಾ ಕ್ರಿಕೆಟ್ ತಂಡಗಳ 3 ನೇ ಟಿ-20 ಪಂದ್ಯ ಇಂದು ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಬೆಂಗಳೂರಿನಲ್ಲಿ 148 ಪ್ರಯಾಣಿಕರು ಸೇಫ್