Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ ನೇಮಕಾತಿ ರದ್ದು 

Advertisement

ಬೆಂಗಳೂರು: ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ.

ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಗಾಯತ್ರಿ ಜಿ.ಎನ್. ಅವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ನೇಮಕಾತಿ ತಡೆಗೆ ಕಾರಣವೇನು?

ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. 

ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸುತ್ತಿದ್ದ ವ್ಯಕ್ತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದಕ್ಕೆ ಪಕ್ಷದ ಒಳಗಡೆ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಆಡಳಿತಾತ್ಮಕ ಕಾರಣಗಳನ್ನು ನೀಡಿ ಸದ್ಯ ಅವರ ನೇಮಕಾತಿಯನ್ನು ತಡೆಹಿಡಿಯಲು ತೀರ್ಮಾನಿಸಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST