Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ

Advertisement
ಬೆಂಗಳೂರು: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಹಾಗೂ ವಿವಿಧ ರಂಗಾಯಣಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಆದೇಶಿಸಿದ್ದಾರೆ.

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು

ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ

ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ

ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ

ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ.

ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲ್ಯಾಗಿದೆ,, ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ