Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ- ಬೆಂಗಳೂರು ವಂದೇ ಭಾರತ ರೈಲಿಗೆ ಅನುಮೋದನೆ

Advertisement
ಕೇಂದ್ರ ಸರಕಾರ, ರೇಲ್ವೇ ಸಚಿವರಿಗೆ ಸಂಸದ ಶೆಟ್ಟರ್ ಅಭಿನಂದನೆ

ಬೆಳಗಾವಿ - ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಬೆಳಗಾವಿ ಜನರ ಬಹುದಿನಗಳ ಕನಸು ಈಗ ನನಸಾಗಿದೆ. ಈ ವಿಚಾರವಾಗಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ಬೆಳಗಾವಿ ಜನತೆಯ ಕನಸನ್ನು ಸತತ ಪ್ರಯತ್ನದಿಂದ ನನಸು ಮಾಡಿದ ಸಂತೃಪ್ತ ಭಾವ, ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಎಂದು‌ ತಿಳಿಸಿದ್ದಾರೆ.

ಬೆಳಗಾವಿ ಮತ್ತು ಬೆಂಗಳೂರಿನ ನಡುವೆ ವಂದೇ‌ ಭಾರತ್ ರೈಲು ಸಂಚಾರದಿಂದ ಪ್ರಯಾಣ ಮತ್ತಷ್ಟು ಸುಗಮವಾಗುವುದಲ್ಲದೇ, ಸಮಯವೂ ಉಳಿತಾಯವಾಗಲಿದೆ. ಅಲ್ಲದೇ, ಬೆಳಗಾವಿಯ ಸಮಗ್ರ ಅಭಿವೃದ್ಧಿಗೂ ಇದು ಪೂರಕವಾಗಲಿದೆ. ಆದಷ್ಟು ಬೇಗ ಸಮಯ ನಿಗದಿಗೊಳಿಸುವಂತೆ ಕೋರುತ್ತೇನೆ ಎಂದು ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.

ಅಲ್ಲದೇ, ಬೆಳಗಾವಿಯಿಂದ ರಾಜ್ಯದ ರಾಜಧಾನಿಗೆ ವಂದೇ ಭಾರತ್ ರೈಲು ಸಂಪರ್ಕ ಒದಗಿಸುವಂತೆ, ತಮ್ಮ ಮನವಿಗೆ‌‌ ಸ್ಪಂದಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್‌ ಅವರಿಗೆ ಹಾಗೂ ಅವರ ಈ ಕಾರ್ಯಕ್ಕೆ ಪ್ರಾರಂಭದಿಂದಲೂ ಸಹಕರಿಸಿದ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಹಾಗೂ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ