Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿರುವ ಖದೀಮರ ಬಂಧನ.

Advertisement
ಹುಬ್ಬಳ್ಳಿ:-  ಛೋಟಾ ಮುಂಬೈ ಎಂದೇ ಹೆಸರಾಗಿರುವ ಹುಬ್ಬಳ್ಳಿಯಲ್ಲಿ ಅನ್ನ ಭಾಗ್ಯ ಯೋಜನೆಗೆ ಕನ್ನ,ಹಾಕುತ್ತಿರುವ ದಂಧೆ ಎಗ್ಗಿಲ್ಲದೇ ರಾಜಾರೋಷವಾಗಿ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಖಚಿತ ಮಾಹಿತಿ ಮೇರೆಗೆ ಪಡಿತರ ಅಕ್ಕಿಯ ಕಳ್ಳಸಾಗಣೆ ಮಾಡುತ್ತಿರುವ ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಅಧಿಕಾರಿಗಳು ಅಕ್ಷರಶಃ ಯಶಸ್ವಿಯಾಗಿದ್ದಾರೆ.



ಹುಬ್ಬಳ್ಳಿಯ ಇಸ್ಲಾಂಪುರ ಎಂಬುವಲ್ಲಿ ಬಡವರಿಗೆ ಉಚಿತವಾಗಿ ವಿತರಿಸಲು ಮೀಸಲಿಟ್ಟ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಖಲಂದರ್ ಅಲ್ಲಾಬಕ್ಷ ಅರಳಿಕಟ್ಟಿ ಎಂಬುವರನ್ನು ಪೊಲೀಸರು ನಿನ್ನೆ ತಡರಾತ್ರಿ ಬಂಧನ ಮಾಡಿದ್ದಾರೆ.



ಆರೋಪಿಯ ವಿಚಾರಣೆ ವೇಳೆ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ದುಡ್ಡಿನ ವ್ಯಾಮೋಹದಿಂದ ಹೆಚ್ಚಿನ ಬೆಲೆಗೆ ಸದಾನಂದ ಕುರ್ಲಿ ಮತ್ತು ಸಚಿನ್ ಜರ್ತಾಕರ ಎಂಬ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದು ಬಯಲಾಗಿದೆ.

ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ಅಬ್ದುಲ್ ಮಜೀದ್ ಖತೀಬ್, ಸಹಾಯಕ ನಿರ್ದೇಶಕರಾದ ವಸುಂದರಾ ಹೆಗ್ಡೆ,ಹಾಗೂ ಸಿಸಿಬಿ ಸಿಬ್ಬಂದಿಯಾದ ವಿಎಸ್ಐಬಿಎನ್ ಲಂಗೋಟಿ, ಎಪ್ ಬಿ ಕುರಿ, ಎಸ್ಆರ್ ಇಚ್ಛಂಗಿ, ಹಾಗೂ ಕಸಬಾ ಪೊಲೀಸ ಠಾಣೆಯ ಎಎಸ್ಐ ಆದ ಪಿಎಂ ಗುಡ್ಡೇಕಾರ ಹಾಗೂ ಇನ್ನೂ ಅನೇಕ ಸಿಬ್ಬಂದಿಗಳು ಸಹ ಇದ್ದರು.

ಸದ್ಯ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.ಪೋಲಿಸರು ಹಾಗೂ ಆಹಾರ ಅಧಿಕಾರಿಗಳ ಈ ಕಾರ್ಯವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರದಿ:- ನಿತೀಶಗೌಡ ತಡಸ ಪಾಟೀಲ್ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ