ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ (Breaking) ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಮನವೊಲಿಸುವಲ್ಲಿ ರಾಜ್ಯ ಸರ್ಕಾರ (Protest) ಯಶಸ್ವಿಯಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಫಲಪ್ರದವಾಗಿದ್ದು, ಆಶಾ ಕಾರ್ಯಕರ್ತೆಯರ ಗೌರವಧನವನ್ನು 2,000 ರೂಪಾಯಿ ಹೆಚ್ಚಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಇನ್ನು ಕೆಲವೇ ಗಂಟೆಗಳಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಹೋರಾಟವನ್ನು ಹಿಂಪಡೆಯುವ ಕುರಿತು ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.
2 ಸಾವಿರ ರೂ. ಹೆಚ್ಚಳಕ್ಕೆ ಒಪ್ಪಿಗೆ, ಮುಂದಿನ ಬಜೆಟ್‌ನಲ್ಲಿ ಅನುದಾನ ಭರವಸೆ
ಗೌರವಧನವನ್ನು 15,000 ರೂಪಾಯಿಗಳಿಗೆ ಏರಿಕೆ ಮಾಡಬೇಕು ಹಾಗೂ ಸದ್ಯದ ಪರಿಸ್ಥಿತಿಯಲ್ಲಿ ಕನಿಷ್ಠ 3,000 ರೂಪಾಯಿಯಾದರೂ ಹೆಚ್ಚಳ ಮಾಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು.
ಪ್ರತಿಭಟನಾನಿರತ ಆಶಾ ಸಹೋದರಿಯರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿದರು.
ಅಂತಿಮವಾಗಿ ಗೌರವಧನವನ್ನು 2,000 ರೂಪಾಯಿ ಹೆಚ್ಚಿಸುವ ತೀರ್ಮಾನವನ್ನು ಪ್ರಕಟಿಸಿದ ಸಿಎಂ, ಇದಕ್ಕಾಗಿ ಮುಂಬರುವ ಬಜೆಟ್‌ನಲ್ಲಿ ಅಗತ್ಯ ಹಣವನ್ನು ಮೀಸಲಿಡುವುದಾಗಿ ಸ್ಪಷ್ಟ ಭರವಸೆ ನೀಡಿದ್ದಾರೆ.

