ಅಥಣಿ : ಪುರಸಭೆಯ ಮುಖ್ಯಾಧಿಕಾರಿ ಅಶೋಕ ಸೀತಾರಾಮ ಗುಡಿಮನಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಅವರ ಸ್ನಾನಕ್ಕೆ ಪುರಸಭೆಯ ಕಚೇರಿ ವ್ಯವಸ್ಥಾಪಕರಾದ ದಯಾ ಕೆ. ಜೋಶಿ ಅವರನ್ನು ತಾತ್ಕಾಲಿಕವಾಗಿ ಮುಖ್ಯಾಧಿಕಾರಿ ಹುದ್ದೆಯ ಪ್ರಭಾರಕ್ಕೆ ನೇಮಿಸಲಾಗಿದೆ. ಪೌರಾಡಳಿತ ನಿರ್ದೇಶನಾಲಯದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಮಂಗಳವಾರ ಈ ಕುರಿತು ಆದೇಶ ಹೊರಡಿಸಲಾಗಿದೆ.
ಕರ್ನಾಟಕ ನಾಗರಿಕ ಸೇವಾ ನಿಯಮಗಳು, 1957ರ ನಿಯಮ 10ರ ಅನ್ವಯ ಅಶೋಕ ಸೀತಾರಾಮ ಗುಡಿಮನಿ ಅವರನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಅವರ ಮೂಲ ಹುದ್ದೆಯಾದ ಕಚೇರಿ ವ್ಯವಸ್ಥಾಪಕರ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಇಳಕಲ್ ನಗರಸಭೆಯಲ್ಲಿ ಖಾಲಿ ಇರುವ ಕಚೇರಿ ವ್ಯವಸ್ಥಾಪಕರ ಹುದ್ದೆಗೆ ಅವರು ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ವರದಿ : ಅಜಯ ಕಾಂಬಳೆ


