Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‌ಐ ಮತ್ತು ಪಿಎಸ್‌ಐ 

Advertisement
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಎಎಸ್‌ಐ ಮತ್ತು ಪಿಎಸ್‌ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ಶರಣಪ್ಪ ಮತ್ತು ಎಎಸ್‌ಐ ವೆಂಕಟೇಶಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇವರು ಜಮೀನು ವಿವಾದ ಸಂಬಂಧ ಗಲಾಟೆ ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 1 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.

ಇಂದು ಕನ್ನಡ ಭವನದ ಸಮೀಪ ಲಂಚ ಪಡೆಯುತ್ತಿದ್ದ ವೆಂಕಟೇಶಪ್ಪ ಮತ್ತು ಚಿಕ್ಕಬಳ್ಳಾಪುರ ವರವಲಯದ ಚಿತ್ರಾವತಿಯ ಸಮೀಪ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಆರೋಪಿಗಳನ್ನು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪಿಎಸ್‌ಐ ಶರಣಪ್ಪ ಸೂಚನೆ ಮೇರೆಗೆ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. 70 ಸಾವಿರ ರೂ. ಲಂಚ ಪಡೆಯುತ್ತಿದ್ದ ವೆಂಕಟೇಶಪ್ಪ ಬಲೆಗೆ ಬಿದ್ದಿದ್ದಾರೆ.

ಮೊಟ್ಲೂರಿನ ರಘು ಅವರಿಂದ ಲಂಚ ಪಡೆಯುವಾಗ ಎಎಸ್‌ಐ ವೆಂಕಟೇಶಪ್ಪ ಬಲೆಗೆ ಬಿದ್ದಿದ್ದಾರೆ. ನಂತರ ಪಿಎಸ್‌ಐ ಶರಣಪ್ಪ ಅವರನ್ನು ಬಂಧಿಸಲಾಗಿದೆ.

ಪಿಎಸ್‌ಐ ಮತ್ತು ಎಎಸ್‌ಐ ಅವರನ್ನು ಪ್ರತ್ಯೇಕ ವಿಚಾರಣೆಗೊಳಪಡಿಸಲಾಗಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ