LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ವಯಂ ನಿವೃತ್ತಿಗೆ ಮುಂದಾದ ಎ ಎಸ್ ಪಿ ನಾರಾಯಣ ಬರಮಣ್ಣಿ

Advertisement
ಧಾರವಾಡ: ಧಾರಾವಾಡ ಎ ಎಸ್ ಪಿ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗೆಸ್ ಸಮಾವೇಶಕ್ಕೆ ನುಗ್ಗಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು.

ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆಯೇ ಈ ಘಟನೆ ನಡೆದಿತ್ತು. ಇದರಿಂದ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ, ಅಂದು ಭದ್ರತೆ ನಿಯೋಜನೆಗೊಂಡಿದ್ದ ಧಾರವಾಡ ಎ ಎಸ್ ಪಿ ನಾರಾಯಣ ಅವರನ್ನು ವೇದಿಕೆಗೆ ಕರೆದು ಹೊಡೆಯುವ ರೀತಿಯಲ್ಲಿ ಕೈ ಎತ್ತಿದ್ದರು. ಅಲ್ಲದೇ ಸಮಾವೇಶದಲ್ಲಿ ಪ್ರತಿಭಟನೆ ನಡೆದ ವಿಚಾರಕ್ಕೆ ಸ್ಥಳದಲ್ಲೇ ಕ್ಲಾಸ್ ತೆಗೆದುಕೊಂಡಿದ್ದರು.

ಇದೀಗ ಧಾರವಾಡ ಎ ಎಸ್ ಪಿ ನಾರಾಯಣ ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದು, ಅಂದು ನಡೆದ ಘಟನೆಯಿಂದ ಅವಮಾನಿತರಾಗಿ ಸ್ವಯಂ ನಿವೃತ್ತಿ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ಎ ಎಸ್ ಪಿ ನಾರಾಯಣ ಅವರು ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಾರಾಯಣ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ