ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿನ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದು ಅಭಿವೃದ್ಧಿ ಹರಿಕಾರ ಮತ್ತು ದಾಸರಹಳ್ಳಿ ಶಾಸಕ ಎಸ್. ಮುನಿರಾಜು ಹೇಳಿದರು.
ಅವರು ಗೃಹಲಕ್ಷ್ಮಿ ಬಡಾವಣೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ಅಗತ್ಯಗಳಿಗೆ ಸ್ಪಂದಿಸಿ ಕ್ಷೇತ್ರದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಸ್ ಮುನಿರಾಜು ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನೆಲಗದರನಹಳ್ಳಿ ವಾರ್ಡಿನ ಬಿಜೆಪಿ ಅಧ್ಯಕ್ಷ ಶಿವ ಪ್ರಸಾದ್, ರಮ್ಯಾ ಬೈರೇಗೌಡ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಜಿಬಿಎ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಭೈರೇಗೌಡ, ಬಿಜೆಪಿ ಮುಖಂಡರಾದ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹರೀಶ್, ಬೆಲ್ ಮಾರ್ ಸುರೇಶ್, ಅಂಜನಮೂರ್ತಿ, ಮಂಡ್ಯ ರವಿ, ಶಿವಣ್ಣ, ಮಹಿಳಾ ಮುಖಂಡರಾದ ಕೌಸಲ್ಯ, ರಮ್ಯ ಭೈರೇಗೌಡ ಸೇರಿದಂತೆ
ಮುಖಂಡರು, ಮಹಿಳೆಯರು ಕಾರ್ಯಕರ್ತರು ಸಮಸ್ತ ನಾಗರಿಕ ಬಂಧು ಭಗನಿಯರು ಉಪಸ್ಥಿತರಿದ್ದರು.
ವರದಿ : ಅಯ್ಯಣ್ಣ ಮಾಸ್ಟರ್


