Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಕನಿಷ್ಠ 17 ಮಂದಿ ಸಾವು 

Advertisement
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ವೆಂಬಕೋಟೈ ಬಳಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು (ಭಾನುವಾರ) ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

​ವಿರುಧುನಗರ ಜಿಲ್ಲೆಯ ಕಟನ್ನಾರ್‌ಪಟ್ಟಿ ಗ್ರಾಮದ ಬಳಿ ಇರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ರಾಸಾಯನಿಕಗಳನ್ನು ಮಿಶ್ರಣ ಮಾಡುವ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ನಾಲ್ಕೈದು ಕಟ್ಟಡಗಳು ಸಂಪೂರ್ಣವಾಗಿ ನೆಲಸಮವಾಗಿದ್ದು, ಕಾರ್ಮಿಕರ ಮೃತದೇಹಗಳು ಆವರಣದಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

​ದುರಂತದ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಲ್ಲದೆ, ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸುವಂತೆ ಸಚಿವರಾದ ಕೆ.ಕೆ.ಎಸ್.ಎಸ್.ಆರ್ ರಾಮಚಂದ್ರನ್ ಮತ್ತು ತಂಗಂ ತೇನ್ನರಸು ಅವರಿಗೆ ಸೂಚನೆ ನೀಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ