ಹಾಸನ: ವಿದ್ಯಾರ್ಥಿನಿಯೊಬ್ಬಳ ಮೇಲೆ ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಆರೋಪಿಯೊಬ್ಬ ಬಾಲಕಿಗೆ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ.ಜನಸಂಚಾರವಿಲ್ಲದ ಪ್ರದೇಶಕ್ಕೆ ಕರೆದೊಯ್ದು ಆರೋಪಿಯು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆರೋಪಿ ಬಾಲಕಿಯನ್ನು ವಾಪಸ್ ಕರೆತರುವಾಗ, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಇದರಿಂದ ಭಯಭೀತರಾದ ಬಾಲಕಿ, ಜೀವ ರಕ್ಷಣೆಗಾಗಿ ಚಲಿಸುತ್ತಿದ್ದ ಬೈಕ್‌ನಿಂದ ಕೆಳಗೆ ಜಿಗಿದಿದ್ದಾಳೆ.
ಬೈಕ್‌ನಿಂದ ಜಿಗಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಮುಖ್ಯ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆತನ ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.


