ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ಕುಮಾರ್ ಕೂಡಾ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಶಿವರಾಜ್ಕುಮಾರ್ ಎಕ್ಸ್ ಪೋಸ್ಟ್: ''ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕನ್ನಡ ಸಾಹಿತ್ಯವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿ, ವಿಶ್ವದ ಗಮನ ಸೆಳೆದ ನಿಮ್ಮ ಸಾಧನೆ, ಕನ್ನಡ ಸಾಹಿತ್ಯಕ್ಕೆ ಹಾಗೂ ಸಾಂಸ್ಕೃತಿಕ ಪರಂಪರೆಗೆ ಮಹತ್ತರವಾದ ಕೊಡುಗೆ. ಈ ಗೌರವ ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತಷ್ಟು ಬಲ ನೀಡಲಿ ಎಂದು ಆಶಿಸುತ್ತೇನೆ''.

ಸುಧಾ ಮೂರ್ತಿ ಪ್ರಶಂಸೆ: ಶಿವಣ್ಣನ ಜೊತೆಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಕೂಡಾ ಬಾನು ಮುಷ್ತಾಕ್ ಅವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಾನು ಮುಷ್ತಾಕ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಬಂದಿದ್ದು, ಇದು ಪ್ರತಿಯೊಬ್ಬ ಕನ್ನಡಿಗ ಮಹಿಳೆಯರಿಗೆ ಡಬಲ್ ಗೆಲುವು ಎಂದಿದ್ದಾರೆ.

