LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್

Advertisement

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿ ಕಚೇರಿ ಬಳಿ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಕೊಲೆಯಾದ ದುರ್ದೈವಿಗಳು.

ಕೊಲೆಯಾದ ರುದ್ರಪ್ಪ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ‌ ಕುಂದರಗಿ ಹಾಗೂ ಪುತ್ರ ಮಡಿವಾಳಪ್ಪ ಕುಂದರಗಿಯನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.

ಅಣ್ಣ-ತಮ್ಮಂದಿರ ನಡುವಿನ ಆಸ್ತಿ ವಿವಾದವೇ ಈ ಭೀಕರ ಕೊಲೆಗೆ ಕಾರಣ ಎನ್ನಲಾಗಿದೆ. ಒಟ್ಟು 38 ಗುಂಟೆ ಜಮೀನನ್ನು ಮೂವರಿಗೆ ಹಂಚಿಕೆ ಮಾಡಿ ನ್ಯಾಯಾಲಯ ಆದೇಶಿಸಿತ್ತು..

ಆದರೆ, ರುದ್ರಪ್ಪ ಅವರು ತಮಗೆ ಬಂದಿದ್ದ ಪಾಲಿನ ಜಮೀನನ್ನು ಮೊದಲೇ ಮಾರಾಟ ಮಾಡಿಕೊಂಡಿದ್ದು, ಇದೀಗ ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಪಟ್ಟು ಹಿಡಿದಿದ್ದರು.

 ಇದೇ ವಿಚಾರವಾಗಿ ಆಸ್ತಿ ಪಾಲುದಾರಿಕೆಗೆ ಅರ್ಜಿ ಸಲ್ಲಿಸಲು ಅವರು ಗ್ರಾಮ ಪಂಚಾಯ್ತಿಗೆ ಬಂದಿದ್ದಾಗ, ರೊಚ್ಚಿಗೆದ್ದ ಸಹೋದರರು ತಂದೆ-ಮಗಳ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

 ಈ ಮಾರಣಾಂತಿಕ ದಾಳಿಯ ವೇಳೆ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು