ಸಿಂಧನೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಜಿಲ್ಲಾ ರೋಗ ವಾಹಕ ಆಶ್ರತರೋಗಗಳ ನಿಯಂತ್ರಣ ಅಧಿಕಾರಿಗಳು ರಾಯಚೂರು, ತಾಲೂಕ ಆರೋಗ್ಯ ಅಧಿಕಾರಿಗಳು ಸಿಂಧನೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆರೋಗ್ಯ ಇಲಾಖೆ, ಸ್ಥಳೀಯ ಆಡಳಿತ ಮತ್ತು ಸನ್ ರೈಸ್ ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳ ಸಹಯೋಗದೊಂದಿಗೆ ನಗರ ಆರೋಗ್ಯ ಕೇಂದ್ರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಡಾ. ಅಯ್ಯನಗೌಡ ಅವರು ಡೆಂಗ್ಯೂ ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಗಾಂಧಿ ವೃತದಲ್ಲಿ ಮಾನವ ಸರಪಳಿ ನಿರ್ಮಿಸಿ ಜನ ಜಾಗೃತಿ ಮಾಡಿ ಜನರನ್ನು ಕಾಡುವ ಡೆಂಗ್ಯೂ ಜ್ವರ ಹಾಗೂ ಇದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವ ಜಾಗೃತ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನೀರು ನಿಲ್ಲುವ ಜಾಗಗಳಾದ ಹಳೆ ಟೈರುಗಳು ತೆಂಗಿನ ಚಿಪ್ಪುಗಳು ಮತ್ತು ಒಡೆದ ಮಡಿಕೆಗಳಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಮನೆಯ ಕಿಡಿಕಿಗಳಿಗೆ ಜಾಲರಿಗಳನ್ನು ಅಳವಡಿಸಿ ಮಲಗುವಾಗ ಸೊಳ್ಳೆ ಪರದೆಯನ್ನು ಬೆಳೆಸುವುದು ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸುವುದು ಮತ್ತು ತೀವ್ರ ಜ್ವರ ತಲೆನೋವು ಮತ್ತು ಮೈಕೈ ನೋವು ಕಂಡು ಬಂದಲ್ಲಿ ನಿರ್ಲಕ್ಷಿಸದೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ : ಆರೋಗ್ಯ ಇಲಾಖೆ ಅಧಿಕಾರಿಗಳಾದ ಜಿ ರಂಗನಾಥ. ಸಂಗನಗೌಡ. ಬಾಲಪ್ಪ. ಗೀತಾ ಹಿರೇಮಠ. ಉದಯ ಮಹೇಶ್. ಅಂಬಮ್ಮ. ಹನುಮಂತ ರೆಡ್ಡಿ. ಪ್ರಕಾಶ್. ಎಂಡಿ ಉಸ್ಮಾನ್. ಹನುಮನ ಗೌಡ. ಶರಣಮ್ಮ. ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ವರದಿ : ಬಸವರಾಜ ಬುಕ್ಕನಹಟ್ಟಿ


