ಸೇಡಂ: ತಾಲೂಕಿನ ಬೊಂದೇಪಲ್ಲಿ ಗ್ರಾಮದಲ್ಲಿ ಅನೇಕ ಅಡೆತಡೆಗಳ ನಂತರ ಮೂರ್ತಿ ಸ್ಥಾಪನೆಗೆ ಅನುಮತಿ ಸಿಕ್ಕಿದ್ದು ಏಪ್ರಿಲ್ ೩೦ ರಂದು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಜಯಂತಿಯ ನಿಮಿತ್ತ ಊರಿನ ವಿವಿಧ ಮುಖ್ಯರಸ್ತೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ನಡೆಸಿ ಸಂಭ್ರಮಿಸಿದರು. ತದನಂತರ ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ವಿವಿಧ ಮುಖಂಡರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಹಿರಿಯ ಮುಖಂಡರು ಹಾಗೂ ಯುವ ಮುಖಂಡರು ಭಾಗಿಯಾಗಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.

