LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರತಿ ತಿಂಗಳ 3ನೇ ಶನಿವಾರ ಬ್ಯಾಗ್ ಲೇಸ್ ಡೇ : ಶಿಕ್ಷಣ ಇಲಾಖೆ ಸೂಚನೆ 

Advertisement
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ಶನಿವಾರ 'ಸಂಭ್ರಮ ಶನಿವಾರ' (ಬ್ಯಾಗ್ರಹಿತ ದಿನ) ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮಕ್ಕಳನ್ನು ಚಟುವಟಿಕೆಗಳಲ್ಲಿ ಬಹುಮುಖ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು, ವಿವಿಧ ಥೀಮ್ಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂವಿವರಣಾತ್ಮಕ ಮಾಡ್ಯೂಲ್ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ ನೀಡಿದೆ.

2025-26 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.

ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್ ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.

ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನವಾಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ಪ್ರತಿ ತಿಂಗಳ 3ನೇ ಶುಕ್ರವಾರ ಬ್ಯಾಗ್ರಹಿತ ದಿನವನ್ನಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ -ಶ್ರೀಲಂಕಾ 2ನೇ ಏಕದಿನ ಪಂದ್ಯ ನಾಳೆ ಗ್ರಾ.ಪಂ.ಗೆ 2186 ಕೋಟಿ ನೀಡದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಈಶ್ವರ ಖಂಡ್ರೆ ನಾಳೆಯವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ: ಡಾ.ಯತೀಂದ್ರ ಸಿದ್ದರಾಮಯ್ಯ ಘೋಷಣೆ ಬಿಜೆಪಿ ಉಸ್ತುವಾರಿಗಳ ಬದಲಾವಣೆ: ಹರೀಶ್ ದ್ವಿವೇದಿ ಹೆಗಲಿಗೆ ಕರ್ನಾಟಕದ ಜವಾಬ್ದಾರಿದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ:ಜಿಲ್ಲಾಧಿಕಾರಿ ಎಡಿಸಿ ಕಾರು ಜಪ್ತಿ ಶಿಕ್ಷಕರ ಮಾರ್ಗದರ್ಶನವೇ ಯಶಸ್ಸಿನ ಮೆಟ್ಟಿಲು: ಸಿದ್ದಮಲ್ಲಯ್ಯ ಹಿರೇಮಠಪಕ್ಷ ಸಂಘಟಿಸದಿದ್ದರೆ ಮುಂದಿನ ಚುನಾವಣೆಗೆ ಟಿಕೆಟ್ ಇಲ್ಲ: ಡಿ.ಕೆ. ಶಿವಕುಮಾರ್ಹಳ್ಳದಲ್ಲಿ ಈಜಾಡು ಹೋಗಿದ್ದ ಇಬ್ಬರು ಮಕ್ಕಳು ದಾರುಣ ಸಾವು ಮತ್ತೆ ಅಸಮಾಧಾನ : ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆಹಣಕಾಸು ಇಲಾಖೆ ಟಿಪ್ಪಣಿ ಬಹಿರಂಗ : 'ಖಾಲಿ ಚೆಂಬು' ಹಿಡಿದು ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ