Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ಉಪಚುನಾವಣೆ ಕಾವು : ಅಭ್ಯರ್ಥಿ ಘೋಷಣೆ ಮೊದಲೇ ನಾಮಪತ್ರ ಸಲ್ಲಿಕೆಗೆ ತಯಾರಿ

Advertisement
ಬಾಗಲಕೋಟೆ : ಹೆಚ್.ವೈ. ಮೇಟಿ ನಿಧನದ ಕಾರಣ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಮಾರ್ಚ್ 23 ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾಗಲಿದೆ.

ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್, ಬಿಜೆಪಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ.ಕಾಂಗ್ರೆಸ್ ಹೆಚ್.ವೈ. ಮೇಟಿ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವು ಚಿಂತನೆಯಲ್ಲಿದೆ. ಆದರೆ ಟಿಕೆಟ್‌ಗಾಗಿ ಕುಟುಂಬದಲ್ಲೇ ಪೈಪೋಟಿ ನಡೆಸಿದೆ.

ಮೇಟಿ ಹಿರಿಯ ಪುತ್ರ ಮಲ್ಲಿಕಾರ್ಜುನ ಮೇಟಿಗೆ ಕಾಂಗ್ರೆಸ್​ ಟಿಕೆಟ್ ನೀಡುವ ಕುರಿತು ಚರ್ಚೆಗಳು ನಡೆಯುತ್ತಿದ್ದವು. ಆದರೆ, ಹೆಚ್‌.ವೈ.ಮೇಟಿ ಪುತ್ರಿ ಮಹಾದೇವಿ ಹುಲ್ಲಪ್ಪ ಮೇಟಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.ಜನವರಿಯಲ್ಲಿಯೇ ಅವರು ರಾಜಕೀಯಕ್ಕೆ ಬರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದರು.

ಈಗ ಮಾರ್ಚ್ 20ರ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ಕ್ಷೇತ್ರದ ಉಪ ಚುನಾವಣೆ ಕಣದ ಕುರಿತು ಕುತೂಹಲ ಮೂಡಿಸಿದ್ದಾರೆ.

ಶನಿವಾರ ಬಾಗಲಕೋಟೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೆಚ್.ವೈ.ಮೇಟಿ ಕುಟುಂಬದವರೂ ಒಬ್ಬ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಯಾರಾದರೂ ಆಕಾಂಕ್ಷಿಯಾಗಬಹುದು.

ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ" ಎಂದು ಹೇಳಿದ್ದರು.

ಮಹಾದೇವಿ ಮೇಟಿ ನಾಮಪತ್ರ: ಮಹಾದೇವಿ ಹುಲ್ಲಪ್ಪ ಮೇಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, 'ಬಾಗಲಕೋಟೆಯ ಜನಶಕ್ತಿ-ಮಹಾದೇವಿ ಮೇಟಿ ಅವರ ನಾಮಪತ್ರ ಸಲ್ಲಿಕೆ' ಎಂದು ಹೇಳಿದ್ದಾರೆ.

'ಶುಕ್ರವಾರ, ದಿನಾಂಕ 20 ಮಾರ್ಚ್ 2026 ರಂದು ಶ್ರೀಮತಿ ಮಹಾದೇವಿ ಮೇಟಿ ಅವರು ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಬಾಗಲಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ' ಎಂದು ಮಾಹಿತಿ ನೀಡಲಾಗಿದೆ.

'ಜನರ ಆಶೀರ್ವಾದ, ಬೆಂಬಲ ಮತ್ತು ವಿಶ್ವಾಸದೊಂದಿಗೆ ಬಾಗಲಕೋಟೆಯ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ನಂಬಿಕೆ ನಮಗಿದೆ. ನಿಮ್ಮ ಆಶೀರ್ವಾದ ಮತ್ತು ಬೆಂಬಲವೇ ನಮ್ಮ ಶಕ್ತಿ' ಎಂದು ತಿಳಿಸಿದ್ದಾರೆ.

ಮಹಾದೇವಿ ಮೇಟಿ ಅವರಿಗೆ ಯಾವ ಪಕ್ಷವೂ ಟಿಕೆಟ್ ಘೋಷಣೆ ಮಾಡಿಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಹಾಗಾದರೆ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ?

ಹೆಚ್.ವೈ.ಮೇಟಿ ಕುಟುಂಬದಲ್ಲಿ ನಡೆಯುತ್ತಿರುವ ಟಿಕೆಟ್ ಪೈಪೋಟಿ ವಿರೋಧ ಪಕ್ಷವಾದ ಬಿಜೆಪಿಗೆ ಲಾಭವಾಗಲಿದೆಯೇ? ಎಂಬ ಚರ್ಚೆಗಳು ನಡೆಯುತ್ತಿವೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಕೊನೆಯ ದಿನ, ಮಾರ್ಚ್ 24ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 26 ಕೊನೆ ದಿನವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್